ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE

ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE


ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್‌ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ತಮ್ಮ ವಿರುದ್ಧ ಅಪಪ್ರಚಾರ ನಡೆಸಿರುವ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳಬೇಕು, ಫಲಿತಾಂಶ ತಡೆ ಹಿಡಿಯಬೇಕು ಎಂದು ಮನವಿ ಮಾಡಿದ್ದಾರೆ.


ಮಂಗಳವಾರ ಬೆಂಗಳೂರಿನಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ ಮಾಡಿದ ಬಳಿಕ ಮಾತನಾಡಿದ ಈಶ್ವರಪ್ಪ, “ಮತದಾನಕ್ಕೆ ಎರಡು ದಿನ ಇರುವಾಗ ನಾನು ಕಣದಿಂದ ಹಿಂದೆ ಸರಿದು, ರಾಘವೇಂದ್ರ ಅವರಿಗೆ ಮತ ಚಲಾಯಿಸಿ ಎಂದು ಮನವಿ ಮಾಡಿದ್ದೇನೆ ಎಂಬ ನಕಲಿ ವಿಡಿಯೋ ಹರಿಬಿಡಲಾಯಿತು” ಎಂದರು.

ಇದನ್ನು ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗವೇ ಹರಿಬಿಟ್ಟಿದ್ದು, ಇದು ಮತದಾರರಲ್ಲಿ ಗೊಂದಲವನ್ನು ಸೃಷ್ಟಿ ಮಾಡಿತು. ಇದರ ಹಿಂದೆ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಕೈವಾಡವಿದೆ. 2019ರ ಚುನಾವಣೆಯಲ್ಲಿ ಮಾಡಿದ್ದ ಪ್ರಚಾರ ಭಾಷಣವನ್ನು ತಿರುಚಿ ವಿಡಿಯೋ ಬಿಡುಗಡೆ ಮಾಡಿದರು” ಎಂದು ಆರೋಪಿಸಿದರು.

ಫಲಿತಾಂಶ ತಡೆ ಹಿಡಿಯಿರಿ: “ಚುನಾವಣೆಯಲ್ಲಿ ಸೋಲುವ ಭಯದಿಂದ ಈ ಕೆಲಸ ಮಾಡಿದ್ದಾರೆ. ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯ ಮಾದರಿ ತುಣುಕೊಂದನ್ನು ಅವರು ಹರಿಬಿಟ್ಟಿದ್ದಾರೆ. ಹಿಂದುತ್ವ ಪ್ರತಿಪಾದಿಸಿದ ಈಶ್ವರಪ್ಪ ತಮ್ಮನ್ನು ಬೆಂಬಲಿಸಿದ್ದಾರೆ ಎಂಬುದಾಗಿ ಸುಳ್ಳು ಮಾಹಿತಿ ಹಂಚಿಕೊಂಡಿದ್ದರು” ಎಂದು ಕೆ. ಎಸ್. ಈಶ್ವರಪ್ಪ ದೂರಿದರು.


“ನಾನು ಕಣದಿಂದ ಹಿಂದೆ ಸರಿದಿರುವುದಾಗಿ ಎಲ್ಲೂ ಸಹ ಹೇಳಿಲ್ಲ ಮತ್ತು ಮಾಧ್ಯಮಗಳಿಗೆ ಹೇಳಿಕೆಯನ್ನು ಸಹ ನೀಡಿಲ್ಲ. ಈ ತಿರುಚಿದ ವಿಡಿಯೋ ಕುರಿತು ನಾನು ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿಯೂ ದೂರು ನೀಡಿದ್ದೇನೆ. ಇದರ ತನಿಖೆ ಪೂರ್ಣಗೊಳ್ಳುವ ತನಕ ಫಲಿತಾಂಶ ತಡೆ ಹಿಡಿಯಬೇಕು” ಎಂದು ಈಶ್ವರಪ್ಪ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಈ ಕುರಿತು ಈಶ್ವರಪ್ಪ ಸಾಮಾಜಿಕ ಜಾಲತಾಣದಲ್ಲಿಯೂ ಪೋಸ್ಟ್ ಹಾಕಿದ್ದು, ‘ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯದಿಂದ ಶ್ರೀಯುತ ಬಿ. ವೈ. ರಾಘವೇಂದ್ರ ಅವರು ಮತದಾನದ ಹಿಂದಿನ ದಿನ ನನ್ನ ಹಳೆಯ ವಿಡಿಯೋವನ್ನು ತಿರುಚಿ ಹಾಗು ನಕಲಿ ಪತ್ರಿಕಾ ವರದಿಯನ್ನು ಸೃಷ್ಠಿಸಿ ಸಾಮಾಜಿಕ ಮಾದ್ಯಮಗಳಲ್ಲಿ ಹರಿಬಿಟ್ಟು ಮತದಾರರಲ್ಲಿ ಗೊಂದಲವನ್ನುಂಟುಮಾಡಿದ್ದು ಈ ವಿಷಯವಾಗಿ ಇಂದು ರಾಜ್ಯ ಚುನಾವಣಾ ಆಯುಕ್ತರನ್ನು ಭೇಟಿಯಾಗಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ದೂರು ಸಲ್ಲಿಸಿದ್ದೇನೆ’ ಎಂದು ಹೇಳಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

22 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago