w
Headlines
Home » ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು – ದೂರು ದಾಖಲು


ಸಾಗರ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ಕತ್ತಾಗಿ ವೈರಲ್ ಆಗಿತ್ತು.


ಸದರಿ ವಿಡಿಯೋವನ್ನು ದುರುಪಯೋಗಪಡಿಸಿಕೊಂಡ ಅಪರಿಚಿತ ಕಿಡಿಗೇಡಿಗಳು ಜನಪ್ರಿಯ ಶಾಸಕ ಗೋಪಾಲಕೃಷ್ಣ ಬೇಳೂರುರ ವಿರುದ್ಧ ಇನಸ್ಟಾಗ್ರಾಂ ನಲ್ಲಿ ಆಪಪ್ರಚಾರ ಮಾಡುವ ಉದ್ದೇಶದಿಂದ ಆರೋಪಿಯು ಇನ್ಸ್ಟ್ರಾಗ್ರಾಮ್ ನಲ್ಲಿ”khadeema_congress” ಎಂಬ  ಖಾತೆಯಿಂದ ವೀಡಿಯೋ ಒಂದನ್ನು ಹರಿಬಿಟ್ಟಿದ್ದಾನೆ. ಆರೋಪಿಯು  ಶಾಸಕರಿಗೆ ತೋಜೋವಧೆ ಮಾಡುವ ಮತ್ತು ಆಗೌರವವನ್ನು ತೋರಿಸುವ ಪ್ರಯತ್ನವನ್ನು ಮಾಡಿದ್ದಾನೆ ಎಂದು ಆರೋಪಿಸಿ.


 ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ “ಚಿನ್ಮಯ್ ಸಿ.ಎಂ” ರವರು ಸಾಗರ ಪೇಟೆ ಠಾಣೆಗೆ ದೂರು ನೀಡಿ ಆರೋಪಿಯ ಈ ಕೃತ್ಯವು  ಕಾನೂನುಬಾಹಿರವಾಗಿದ್ದು ಗೌರವಾನ್ವಿತ ಶಾಸಕರ ತೋಜೋವಧೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಆರೋಪಿಯ ವಿರುದ್ಧ ಕಾನೂನಿನ ಕಠಿಣ ಕ್ರಮಕ್ಕಾಗಿ ಒತ್ತಾಯಿಸಿ ದೂರನ್ನು ನೀಡಿದ್ದಾರೆ. 


ಇದೀಗ ಸಾಗರ ಪೇಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರನ್ನು ದಾಖಲಿಸಿಕೊಂಡ ಸಾಗರ ಪೇಟೆ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯ ಪತ್ತೆ ಕಾರ್ಯ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.