ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete
ರಿಪ್ಪನ್‌ಪೇಟೆ : ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆದ ಘಟನೆ ಸೂಡೂರು ಗೇಟ್ ಬಳಿ ನಡೆದಿದೆ.
ಕುಂದಾಪುರ – ಶಿವಮೊಗ್ಗ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.
ಮಧ್ಯಾಹ್ನ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಮರ ಧರೆಗುರುಳಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಅರಣ್ಯ ಇಲಾಖೆ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮರ ತೆರವುಗೊಳಿಸಲು ಯತ್ನಿಸುತ್ತಿದ್ದಾರೆ.
ಮರ ಉರುಳಿಬಿದ್ದ ಪರಿಣಾಮ ಎರಡು ಕಡೆಯಲ್ಲಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.