ಹೊಸನಗರ , ರಿಪ್ಪನ್‌ಪೇಟೆ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮದ ಶಾಲಾ ಪ್ರಾರಂಭೋತ್ಸವ | School opening celebration

ಹೊಸನಗರ , ರಿಪ್ಪನ್‌ಪೇಟೆ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮದ ಶಾಲಾ ಪ್ರಾರಂಭೋತ್ಸವ | School opening celebration

ಹೊಸನಗರ ಪಟ್ಟಣ ,ರಿಪ್ಪನ್‌ಪೇಟೆ ,ಹಡ್ಲುಬೈಲ್ ಹಾಗೂ ಚಿಕ್ಕಜೇನಿ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮ ಸಡಗರದಿಂದ ಶಾಲಾ ಪ್ರಾರಂಭೋತ್ಸವ ನಡೆಯಿತು.

ಆವರಣವನ್ನು ಸ್ವಚ್ಛಗೊಳಿಸಿ ತಳಿರ ತೋರಣ ಹೂವುಗಳನ್ನು ಕಟ್ಟಿ ಶಾಲಾ ಪ್ರಾರಂಭೋತ್ಸವಕ್ಕೆ ಮೆರುಗು ನೀಡಲಾಗಿತ್ತು.ವಿದ್ಯಾರ್ಥಿಗಳಿಗೆ ಹೂವು ನೀಡಿ ಶಾಲೆಗೆ ಸ್ವಾಗತಿಸಲಾಯಿತು.


ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಮೂರ್ತಿ ಹೆಚ್ ಆರ್ ಮಕ್ಕಳಿಗೆ ಹೂಗುಚ್ಛ ನೀಡುವ ಮೂಲಕ ಮಕ್ಕಳನ್ನು ಬರಮಾಡಿಕೊಂಡರು.

ಇದೇ ಸಂಧರ್ಭದಲ್ಲಿ ತಾಲೂಕು ಶಿಕ್ಷಣ ಸಮನ್ವಯ ಅಧಿಕಾರಿಯಾದ ಕರಿಬಸಪ್ಪ ಶಾಲಾ ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಿದರು.

ಈ ಸಂಧರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಂಜಪ್ಪ ಬಿ, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಯಾದ ಮಂಜುನಾಥವರು ಶಾಲಾ ಮುಖ್ಯ ಶಿಕ್ಷಕರಾದ ರೇಣುಕಪ್ಪ ಹಾಗೂ ಸಹ ಶಿಕ್ಷಕರುಗಳು ಎಸ್ ಡಿ ಎಂಸಿ ಸದಸ್ಯರುಗಳು ಮತ್ತು ಪೋಷಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಡಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ:


ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಹೂವು ನೀಡುವುದರ ಮೂಲಕ ಸ್ವಾಗತಿಸಲಾಯಿತು.ಈ ಸಂಧರ್ಭದಲ್ಲಿ SDMC ಅಧ್ಯಕ್ಷರು, ಸದಸ್ಯರು ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು‌ ಇದ್ದರು.


ಹೊಸನಗರ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ :


ಹೊಸನಗರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿತ್ತು. ಇದೇ ವೇಳೆ ಮಕ್ಕಳಿಗೆ ಶಾಲಾ ಸಮವಸ್ತ್ರ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು.

ಶಾಲೆಗಳಲ್ಲಿ ಸಿಹಿ ಹಾಗೂ ಪಾಯಸಗಳನ್ನು ಮಕ್ಕಳಿಗೆ ಪೋಷಕರಿಗೆ ಶಾಲಾ ಅಭಿವೃದ್ಧಿ ಸಮಿತಿಯವರಿಗೆ ಶಿಕ್ಷಕ ವೃಂದದವರು ವಿತರಿಸಿ ಸಂಭ್ರಮಿಸಿದರು.


ಚಿಕ್ಕಜೇನಿ ಸರ್ಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಚಿಕ್ಕಜೇನಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ಬೇಸಿಗೆ ರಜೆಯನ್ನು ಮುಗಿಸಿ ಶಾಲೆ ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಮುಂದಿನ ತರಗತಿಯ ಕೊಠಡಿಯಲ್ಲಿ ತಮ್ಮ ಆಸನವನ್ನು ಅಲಂಕರಿಸಿ ತಮ್ಮ ರಜಾ ದಿನದಲ್ಲಿ ಮದುವೆಮನೆ, ಅಜ್ಜ-ಅಜ್ಜಿ, ಸಂಬಂಧಿಕರ ಮನೆಗಳಲ್ಲಿಗೆ ಹೋಗಿ ಕಳೆದ ದಿನಗಳನ್ನು ಮೇಲಕು ಹಾಕುತ್ತಿದುದ್ದು ವಿಶೇಷವಾಗಿತ್ತು.

ಚಿಕ್ಕಜೇನಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕ ನಾಗರಾಜ್, ಸಹ ಶಿಕ್ಷಕಿಯರಾದ ಅನಿತಾ, ಕು.ಕಾವ್ಯ ಇನ್ನಿತರರು ಹಾಜರಿದ್ದರು.

ತಾಲೂಕಿನಾದ್ಯಂತ ಶಾಲೆ ಪ್ರಾರಂಭೋತ್ಸವ ಸಂಭ್ರಮ


ಇನ್ನೂ ಶಾಲೆಗಳಲ್ಲಿ ಸಿಹಿ ಹಾಗೂ ಪಾಯಸಗಳನ್ನು ಮಕ್ಕಳಿಗೆ, ಪೋಷಕರಿಗೆ, ಶಾಲಾ ಅಭಿವೃದ್ಧಿ ಸಮಿತಿಯವರಿಗೆ ಶಿಕ್ಷಕ ವೃಂದದವರು ವಿತರಿಸಿ ಸಂಭ್ರಮಿಸಿದರು.

ಆರಂಭದ ದಿನ ಮಕ್ಕಳಿಗೆ ಶಿಕ್ಷಕರು ಪಾಠ ಪ್ರವಚನ ಮಾಡದೇ ಸಂತೋಷದಿಂದ ಕಾಲಕಳೆಯುವಂತೆ ಬಿಟ್ಟಿರುವುದು ಇನ್ನೊಂದು ಸಂತಸದ ಸಂಗತಿಯಾಗಿತು.

ಒಟ್ಟಾರೆಯಾಗಿ ಇನ್ನೂ 15 ದಿನ ರಜೆ ಇದ್ದಿದ್ದರೆ ಇನ್ನೂ ಕುಣಿದು ಕುಪ್ಪಳಿಸುತ್ತಿದ್ದವು ಎಂದು ಹಲವು ವಿದ್ಯಾರ್ಥಿಗಳು ತಮ್ಮ ರಜಾ ದಿನದ ಅನುಭವವನ್ನು ಮಾಧ್ಯಮದವರ ಬಳಿ ಹಂಚಿಕೊಂಡರು.

ಹೊಸನಗರ ತಾಲೂಕಿನ ಹಲವು ಶಾಲೆಗಳಲ್ಲಿ ಮಕ್ಕಳಿಗೆ ಶಾಲಾ ಸಮವಸ್ತ್ರ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

21 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

2 days ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

2 days ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

2 days ago