Accident | ಆಟೋಗೆ ಕ್ಯಾಂಟರ್ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು
ಆಟೋವೊಂದಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ನಡೆದಿದೆ.
ಅಪಘಾತಕ್ಕೆ ಕಾರಣವಾದ ಕ್ಯಾಂಟರ್ ಚಾಲಕನು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಬಂಧಿಸಲಾಗಿದೆ.ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಪಘಾತದಲ್ಲಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿ ಗಾನವಿ (17 ವ) ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಗಾನವಿ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ನಿವಾಸಿಯಾಗಿರುವ ಗಾನವಿ ರಜೆ ಊರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಕಾಲೇಜಿಗೆ ವಾಪಸ್ ಆಗುವಾಗ ಅಪಘಾತವಾಗಿದೆ. ಹಿಂದಿನಿಂದ ಬಂದ ಕ್ಯಾಂಟರ್ ಆಟೋ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ.
ಹಿಂಡ್ ಅಂಡ್ ರನ್ ಮಾಡಿದ ಕ್ಯಾಂಟರ್ ರನ್ನು ಪೊಲೀಸರು ಚೀಲೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್