ತೀರ್ಥಹಳ್ಳಿ: ಪಟ್ಟಣದಲ್ಲಿ ಕಾರೊಂದು ಏಕಾಏಕಿ ಬಟ್ಟೆ ಅಂಗಡಿ ಒಳಗೆ ನುಗ್ಗಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ.
ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ ಟೈಲ್ಸ್ ಅಂಗಡಿಯ ಕೆಳಗೆ ಕಾರು ಬಿದ್ದಿದ್ದು, ಒಂದು ಸ್ಕೂಟಿ ಕೂಡ ಪುಡಿ ಪುಡಿಯಾಗಿದೆ. ಸ್ಥಳದಲ್ಲಿ ಯಾರಾದರೂ ಇದ್ದಿದ್ದರೆ ದೊಡ್ಡ ದುರಂತ ನಡೆಯುತ್ತಿತ್ತು ಎಂದು ಸ್ಥಳೀಯರು ಹೇಳುತಿದ್ದಾರೆ.
ಆಗುಂಬೆ ರಸ್ತೆಯಿಂದ ಛತ್ರಕೇರಿ ಕಡೆಗೆ ತಿರುಗಿಸುವ ವೇಳೆ ಈ ಅವಘಡ ನಡೆದಿದ್ದು ವ್ಯಾಗನರ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಅಪಘಾತದಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ.
ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.