Accident | ತೀರ್ಥಹಳ್ಳಿಯ ಕುಡುಮಲ್ಲಿಗೆ ಬಳಿ ಕಾರುಗಳ ಮುಖಾಮುಖಿ ಡಿಕ್ಕಿ – ಮಹಿಳೆ ಸಾವು
ತೀರ್ಥಹಳ್ಳಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಶಂಶಾದ್ ಬಾನು (50) ಮೃತ ಮಹಿಳೆ. ಸಲಾಂ ಸಾಬ್, ಆಸಿಫ್ ಅಲಿ ಮತ್ತು ಸತ್ತಾರ್ ಎಂಬುವವರಿಗೆ ಗಾಯಗಳಾಗಿವೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಸಲಾಂ ಸಾಬ್ ಎಂಬುವರನ್ನು ದಾವಣಗೆರೆಯಿಂದ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲು ಇಕೋ ಕಾರಿನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕುಡುಮಲ್ಲಿಗೆ ಬಳಿ ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರಿಗೆ ಇಕೋ ಕಾರು ಡಿಕ್ಕಿಯಾಗಿದೆ.
ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.