Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ

Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ


ಬಂಗಾರ ಪಾಲಿಶ್‌ ಹಾಕಿಕೊಡುತ್ತೇವೆ ಎಂದು ಮಹಿಳೆಯರನ್ನು ಯಾಮಾರಿಸುವ ಗ್ಯಾಂಗ್‌ವೊಂದನ್ನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಆನಂದಪುರ ಪೊಲೀಸ್‌ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಕುತೂಹಲ ಮೂಡಿಸಿದ ಪ್ರಕರಣದಲ್ಲಿ ಅಜ್ಜಿಗೆ ನಕಲಿ ಚಿನ್ನದ ನಾಣ್ಯಕೊಟ್ಟು ಆಕೆಯ ಬೆಂಡೋಲೆಯನ್ನು ಪಾಲೀಶ್‌ ನೆಪದಲ್ಲಿ ಕದ್ದೊಯ್ದಿದ್ದ ಆರೋಪದ ಅಡಿಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ.

ನಡೆದಿದ್ದೇನು..???

ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ  ಕೆಲವು ತಿಂಗಳಗಳ ಹಿಂದೆ ಹೊಸಂತೆ ಗ್ರಾಮದ ಬಸಮ್ಮ ಎಂಬ ಮಹಿಳೆ ಆಸ್ಪತ್ರೆಗೆ ಹೋಗಿ ಬರುತ್ತಿದ್ದಾಗ ಅವರನ್ನು ಮುಖಾಮುಖಿಯಾಗಿ ಬೇಟಿಯಾದ ವ್ಯಕ್ತಿಯೊಬ್ಬ ಏನು.?? ಕಿವಿಯ ಓಲೆ ಹಳೆದಾಗಿ ಹೋಗಿದೆ. ಕೊಡಿ ಪಾಲಿಶ್‌ ಮಾಡಿಕೊಡುತ್ತೇನೆ ಎಂದಿದ್ದಾನೆ. ಅಲ್ಲದೆ ಪಾಲಿಶ್‌ ಮಾಡಿ ಕೊಡುವರೆಗೂ ಈ ಈ ಎರಡು ಬಂಗಾರದ ಪದಕಗಳನ್ನು ಇಟ್ಕೊಂಡಿರಿ ಎಂದಿದ್ದಾನೆ.


ಚಿನ್ನದ ಪದಕದ ಮಾತನ್ನ ನಂಬಿದ ಅಜ್ಜಿ ಓಲೆ ಬಿಚ್ಚಿ ಆತನ ಕೈಗೆ ಕೊಟ್ಟಿದ್ದಾಳೆ. ಆತ ಅದನ್ನು ತೆಗೆದುಕೊಂಡು ಅಲ್ಲಿಂದ ಕಾಲ್ಕಿತ್ತಿದ್ದ. ಪುಣ್ಯಾತ್ಮ ವಾಪಸ್‌ ಬರದಿರುವುದನ್ನು ನೋಡಿ ಅಜ್ಜಿ ಅಲ್ಲಿಯೇ ಇದ್ದ ಅಂಗಡಿಯೊಂದರಲ್ಲಿ ಪದಕಗಳನ್ನ ಪರೀಕ್ಷೆ ಮಾಡಿಸಿದ್ದಾಳೆ.

ಆಗ ಅವರಿಗೆ ಆಘಾತ ಎದುರಾಗಿತ್ತು. ದಾರಿಹೋಕ ಕೊಟ್ಟ ಪದಕ ನಕಲಿಯಾಗಿತ್ತು. ಹೀಗಾಗಿ ಬಸಮ್ಮ  ಆನಂದಪುರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.

ಪ್ರಕರಣದ ಸಂಬಂಧ ತನಿಖೆ ನಡೆಸಿದ ಪೊಲೀಸರು ಶಿಕಾರಿಪುರ ಗ್ರಾಮದ ಕೃಷ್ಣಪ್ಪ (65) ಹಾಗೂ ವೀರೇಶ್ (32) ಎಂಬಿಬ್ಬರನ್ನು ಬಂಧಿಸಿದ್ದಾರೆ. ಆತನ ಬಳಿಯಿಂದ ಅಜ್ಜಿ ಓಲೆಯನ್ನ ವಶಕ್ಕೆ ಪಡೆದು ತನಿಖೆ ನಡೆಸ್ತಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

24 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

1 day ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

1 day ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

2 days ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

3 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

3 days ago