Headlines

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ ಹಾಗೂ ಮೇರಿ ಮಾತಾ ಪ್ರೌಢಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದು, ಚಿರಪರಿಚಿತರಾಗಿರುವುದು ಗೆಲುವಿಗೆ ಸಹಕಾರಿ ಆಗಲಿದೆ ಎಂದರು.

ಶಿಕ್ಷಕರು, ಪದವೀಧರರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದೇವೆ. ಎರಡೂ ವರ್ಗಗಳ ಸಮಸ್ಯೆಗಳು ಹಾಗೂ ಅವರ ಬೇಡಿಕೆಗಳ ಕುರಿತು ಸರಕಾರಕ್ಕೆ ಅರಿವಿದೆ. ಮುಂದಿನ ದಿನಗಳಲ್ಲಿ ಅವುಗಳನ್ನು ಬಗೆಹರಿಸಲು ಸರಕಾರ ಬದ್ಧವಾಗಿದೆ. ಪ್ರಸ್ತುತ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವುದು ಹೆಚ್ಚು ಸೂಕ್ತ ಎಂದರು.

ಈ ಸಂಧರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ , ಮುಖಂಡರಾದ ಕಲಗೋಡು ರತ್ನಾಕರ್ , ಬಿ ಪಿ ರಾಮಚಂದ್ರ , ಅಮೀರ್ ಹಂಜಾ ,ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ, ರಿಪ್ಪನ್‌ಪೇಟೆ ಘಟಕದ ಅಧ್ಯಕ್ಷ ಗಣಪತಿ ಗವಟೂರು ಹಾಗೂ ಮಧುಸೂಧನ್, ಜಿ ಆರ್ ಗೋಪಾಲಕೃಷ್ಣ , ರವೀಂದ್ರ ಕೆರೆಹಳ್ಳಿ , ರಮೇಶ್ ಫ್ಯಾನ್ಸಿ ,ಲೇಖನ ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *