Ripponpete | ಕಾರ್ಮಿಕ ದಿನಾಚರಣೆ ಅಂಗವಾಗಿ ಮತದಾನ ಜಾಗೃತಿ ಜಾಥಾ
ರಿಪ್ಪನ್‌ಪೇಟೆ : ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಮತದಾನ ಜಾಗೃತಿ ಜಾಥಾ ಹಾಗೂ ವಿವಿಧ ಕಾರ್ಯಕ್ರಮಗಳು ಜರುಗಿದವು. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.
ಕಟ್ಟಡ ಕಾರ್ಮಿಕರ ಸಂಘ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟ ಹೊಸನಗರ ಗ್ರಾಮಾಂತರ ಇವರ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ನಡೆಸಿ ನಂತರದಲ್ಲಿ ಚೌಡೇಶ್ವರಿ ಅಮ್ಮನವರ ದೇವಸ್ಥಾನದ ಆವರಣದಲ್ಲಿ ಮಹಿಳಾ ಕಾರ್ಮಿಕರು ಹಾಗೂ ಅತಿ ಹೆಚ್ಚು ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದಕ್ಷ ಸುಂದರ್ ಬಾಬು ಇಡೀ ಪ್ರಪಂಚದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಬೃಹತ್ ಸಂಖ್ಯೆಯ ಮತದಾರರನ್ನು ಹೊಂದಿರುವ ದೇಶ ನಮ್ಮದು. ಮತದಾನದ ಹಕ್ಕನ್ನು ಪಡೆದಿರುವ ಪ್ರತಿಯೊಬ್ಬರೂ ಮತದಾನದ ದಿನದಂದು ತಪ್ಪದೇ ಮತದಾನ ಮಾಡಿದರೆ ಮತದಾನದ ಪ್ರಮಾಣ ಹೆಚ್ಚುತ್ತದೆ. ಗರಿಷ್ಠ ಮತದಾನ ಬಲಿಷ್ಠ ಪ್ರಜಾತಂತ್ರ ವ್ಯವಸ್ಥೆಗೆ ಅವಕಾಶ ಮಾಡಿಕೊಡುತ್ತದೆ. ಹಾಗಾಗಿ, ಮೇ.07 ರಂದು ನಡೆಯಲಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರೂ ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಗೌರವ ಅಧ್ಯಕ್ಷರಾದ ಮಹಾದೇವ ಆಚಾರ್ ಜಿಲ್ಲಾ ಅಧ್ಯಕ್ಷ ಸಂಜಯ್ ಕುಮಾರ್, , ಜಿಲ್ಲಾ ಕಾರ್ಯದರ್ಶಿ ಆರ್ಮುಗಂ, ಹೊಸನಗರ ಗ್ರಾಮಾಂತರ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್, ಉಪಾಧ್ಯಕ್ಷ ಶೌಕತ್,ಕಾರ್ಯದರ್ಶಿ ಪ್ರಶಾಂತ ಆಚಾರ್ಯ,ಪದಾಧಿಕಾರಿಳಾದ ಪ್ರಭಾಕರ್ ಆಚಾರ್ , ಪರಮೇಶ್ ಆಚಾರ್, ಖಜಾಂಚಿ ರಾಘವೇಂದ್ರ, ಸ್ವಾತಿ,ಪರಮೇಶ್ , ರಾಘವೇಂದ್ರ ಹಾಗೂ ಇನ್ನಿತರರಿದ್ದರು.