Headlines

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ

Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ತಲೆಕಟ್ಟಿನ ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ “ನಮ್ಮೂರು ನಮ್ಮ ಕೆರೆ” ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿ ಧರ್ಮಸ್ಥಳ ಸಂಸ್ಥೆ, ಸ್ಥಳೀಯರ ನೆರವಿನಿಂದ ಸಣ್ಣ ಕೆರೆಗಳನ್ನು, ಸರ್ಕಾರದ ಸಹಭಾಗಿತ್ವದೊಂದಿಗೆ ಕೆರೆ ಸಂಜೀವಿನಿ ಯೋಜನೆಯಡಿ ದೊಡ್ಡ ಕೆರೆಗಳನ್ನು ಪುನಶ್ಚೇತನಗೊಳಿಸುತ್ತಿದೆ’ ಎಂದರು.

ಈ ಸಂಧರ್ಭದಲ್ಲಿ ಕೆರೆ ಸಮಿತಿ ಅಧ್ಯಕ್ಷರಾದ ಕಗ್ಗಲಿ‌ ಲಿಂಗಪ್ಪ, ತಾಪಂ ಮಾಜಿ ಸದಸ್ಯೆ ಗೌರಮ್ಮ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ಶಶಿಧರ್ ,ರಂಜಿತ್ ಕುಮಾರ್ ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *