Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ


ರಿಪ್ಪನ್‌ಪೇಟೆ;-ಇಲ್ಲಿನ ಸಾಗರ ರಸ್ತೆಗೆ  ಸಂಪರ್ಕಿಸುವ ಗ್ರಾಮ ಪಂಚಾಯ್ತಿ ಹಿಂಭಾಗದ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ವಿದ್ಯುತ್‌ಕಂಬವನ್ನು  ಅಳವಡಿಸಿರುವುದರ ಬಗ್ಗೆ ಸಾರ್ವಜನಿಕರು  ಮೆಸ್ಕಾಂ ಇಲಾಖೆಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ನಕಾಶೆ ಕಂಡ ರಸ್ತೆಯನ್ನು ಆಕ್ರಮಸಿಕೊಳ್ಳುತ್ತಿದ್ದಾರೆಂದು ನ್ಯಾಯಾಲಯದಲ್ಲಿ  ಈ ಹಿಂದೆ  ರಸ್ತೆಯ ನಿವಾಸಿಗಳು ದೂರು ದಾಖಲಿಸಿದ್ದು ನ್ಯಾಯಾಲಯ ಸಾರ್ವಜನಿಕರ ಮನವಿಗೆ ಸ್ಪಂದಿಸಿ 8 ಅಡಿ ಅಗಲದ ಸಂಪರ್ಕ  ರಸ್ತೆಗೆ ಓಡಾಡಲು ಮುಕ್ತ ಅವಕಾಶ ನೀಡಿ ಅದೇಶವನ್ನು ನೀಡಲಾಗಿದ್ದರೂ ಕೂಡಾ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ಸಂಬಂಧಿಸಿದ ಅಧಿಕಾರಿಗಳು ಏಕಾಏಕಿ ರಸ್ತೆಯಲ್ಲಿ ಮೆಸ್ಕಾಂ ಕಂಬವನ್ನು ಅಳವಡಿಸಿರುತ್ತಾರೆ.

ಸಾಗರ–ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ-26 ರಲ್ಲಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಿಂದ ಈ ಎರಡು ರಾಜ್ಯ ಹೆದ್ದಾರಿ ಸಂಪರ್ಕದ ರಸ್ತೆಯ ದ್ವಿಪಥ ರಸ್ತೆಗೆ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ರಸ್ತೆ ಆಗಲೀಕರಣ ಕಾಮಗಾರಿ ಆರಂಭಿಸಲಾಗಿ ಒಂದು ವರ್ಷಗಳಾಗುತ್ತಾ ಬಂದರೂ ಕೂಡಾ ಇನ್ನೂ ಕಾಮಗಾರಿ ಅಮೆಗತಿಯಲ್ಲಿ ಸಾಗುತ್ತಿದ್ದು  ವಿನಾಯಕ ವೃತ್ತದ ಬಳಿಯ ಪಾತ್ರೆ ಅಂಗಡಿಯ ಬಳಿ ಬಾಕ್ಸ್ ಚರಂಡಿಗೆ ಹೊಂದಿಕೊಂಡಂತೆ ಇರುವ ಅಂಗಡಿಯನ್ನು ತೆರವು ಮಾಡದೆ ಈಗ ಆವರ ಕಟ್ಟಡ ಬಳಿಯ ಈ ಡಿವೇಶನ್ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ಮೆಸ್ಕಾಂ ಇಲಾಖೆಯವರು ಆವೈಜ್ಞಾನಿಕವಾಗಿ ಕಂಬವನ್ನು ಆಳವಡಿಸಿರುವುದರಿಂದ  ಸಾರ್ವಜನಿಕರು  ಓಡಾಡಂತಾಗಿದೆ ಎಂದು  ಈ ರಸ್ತೆಯ,ನಿವಾಸಿಗಳಾದ ಜಿ.ಕೆ.ಆನಂತಶಾಸ್ತಿ, ಭದ್ರಪ್ಪಗೌಡ,ಗುರುಮೂರ್ತಿ, ಶಿವರಾಜ್ ಪ್ರಭು,  ಶೈಲಾ ಆರ್.ಪ್ರಭು. ಹಿಟ್ಟಿನ ಗಿರಣಿ ರಘವೇಂದ್ರ,ಇನ್ನಿತರ ಹಲವರು ಆರೋಪಿಸಿ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮೂಲಕ ಸಂಬಂಧ ಪಟ್ಟ ಇಲಾಖೆಯ ಗುತ್ತಿಗೆದಾರ ಮತ್ತು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ – ಪದಾಧಿಕಾರಿಗಳ ವಿವರ ಇಲ್ಲಿದೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ , ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆಯ್ಕೆ –…

4 hours ago

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

20 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

21 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

22 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

2 days ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

2 days ago