Ripponpete | ನಾಳೆ(04-05-2024) ವಿದ್ಯುತ್ ವ್ಯತ್ಯಯ ಇಲ್ಲ | ಪ್ರಕಟಣೆ ಹಿಂಪಡೆದ ಮೆಸ್ಕಾಂ ಇಲಾಖೆ
ರಿಪ್ಪನ್ ಪೇಟೆ : ಪಟ್ಟಣದಲ್ಲಿ ನಾಳೆ 04/05/24 ರ ವಿದ್ಯುತ್ ವ್ಯತ್ಯಯವಾಗುತ್ತದೆ ಎನ್ನುವ ಪ್ರಕಟಣೆಯನ್ನು ಮೆಸ್ಕಾಂ ಇಲಾಖೆ ಹಿಂಪಡೆದಿದೆ.
ನಾಳೆ ಎಂದಿನಂತೆ ವಿದ್ಯುತ್ ಸರಬರಾಜು ಇರಲಿದೆ ಎಂದು ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ವಿದ್ಯುತ್ ಸರಬರಾಜು ನಿಲ್ಲಿಸಲು ತೀರ್ಮಾನಿಸಲಾಗಿತ್ತು ಆದರೆ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಕಾಮಗಾರಿಯನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.