Ripponpete | ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ

ಪ್ರಜ್ವಲ್ ರೇವಣ್ಣ ಪ್ರಕರಣ ಸಿ.ಬಿ.ಐ.ಗೆ ಒಪ್ಪಿಸುವಂತೆ  ರಾಜ್ಯಪಾಲರಿಗೆ ಜೆಡಿಎಸ್ ಆಗ್ರಹ


ರಿಪ್ಪನ್‌ಪೇಟೆ : ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್‌ಡ್ರೈವ್ ಬಿಡುಗಡೆ ಪ್ರಕರಣವನ್ನು ಸಿಬಿಐ ಅಥವಾ ಸುಪ್ರಿಂಕೋರ್ಟ್ ನ್ಯಾಯಧೀಶರಿಗೆ ವಹಿಸುವಂತೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರನ್ನು ಸಂಪುಟದಿಂದ  ವಜಾ ಮಾಡುವಂತೆ  ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ನೇತೃತ್ವದಲ್ಲಿ ರಾಜ್ಯಪಾಲರರಿಗೆ ಉಪತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಆಗ್ರಹಿಸಿದರು.

ಮನವಿ ಪತ್ರವನ್ನು ಸಲ್ಲಿಸಿ ಮಾದ್ಯಮಪ್ರತಿನಿಧಿಗಳೊಂದಿಗೆ ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮತ್ತು ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ಮಾತನಾಡಿ ಪ್ರಜ್ವಲ್ ರೇವಣ್ಣನವರ ಪ್ರಕರಣ ಮತ್ತು ಪೆನ್‌ಡ್ರೈವ್ ಬಿಡುಗಡೆ ಪ್ರಕರಣದ ಬಗ್ಗೆ ವ್ಯವಸ್ಥಿತವಾದ ಸಂಚು ನಡೆಸಿದ್ದು, ಇದರ ಬಗ್ಗೆ ತನಿಖೆಗೆ ಈಗಾಗಲೇ ರಾಜ್ಯ ಸರ್ಕಾರ ವಿಶೇಷ ತನಿಖಾದಳವನ್ನು ರಚಿಸಿದ್ದು, ಈವರೆಗೂ ಮೇಲ್ಕಂಡ ಕೃತ್ಯಕ್ಕೆ ಸಂಬಂಧಪಟ್ಟವರನ್ನು ಬಂಧಿಸಿರುವುದಿಲ್ಲ. ಹಾಗೂ ನಿಯಮಾನುಸಾರ ವಿಚಾರಣೆ ನಡೆಸುತ್ತಿಲ್ಲ. ತನಿಖೆಯ ಸಂಪೂರ್ಣ ಪ್ರಕ್ರಿಯೆಯು ರಾಜ್ಯ ಸರಕಾರದ ನಿರ್ದೇಶನದಂತೆ ನಡೆಸಲಾಗುತ್ತಿದೆ. ಇದರಿಂದ ಹಾಸನ ಜಿಲ್ಲೆಯ ಮಹಿಳಾ ಸಂತ್ರಸ್ಥರಿಗೆ ತೀವ್ರ ಅನ್ಯಾಯವಾಗಿದ್ದು, ಇದರ ಹಿಂದೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಇವರ ಕೈವಾಡ ಇರುವುದಾಗಿ ಮಾದ್ಯಮಗಳಲ್ಲಿ ಭಿತ್ತರವಾಗುತ್ತಿದ್ದು, ಇದರ ಪರಿಣಾಮ ದೇಶವಿದೇಶಗಳಲ್ಲಿ ಚರ್ಚೆಗೆ ಗ್ರಾಸವಾಗಿರುತ್ತದೆ. ಇದೊಂದು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಸತ್ಯಾಸತ್ಯತೆ ಹೊರಬರಬೇಕಾದ ಅನಿವಾರ್ಯತೆಯಿರುವುದರಿಂದ ರಾಜ್ಯ ಸರ್ಕಾರ ಪ್ರಸ್ತುತ ರಚಿಸಿರುವ ವಿಶೇಷ ತನಿಖಾದಳವನ್ನು ರದ್ದು ಪಡಿಸಿ ಇದರ ಸಂಪೂರ್ಣ ತನಿಖೆಯನ್ನು ಸಿಬಿಐಗೆ ಅಥವಾ ಸುಪ್ರಿಂಕೋರ್ಟ್ ನ್ಯಾಯಾಧೀಶರಿಂದ ತನಿಖೆ ವಹಿಸುವುದು ಅತ್ಯಗತ್ಯವಾಗಿರುತ್ತದೆ.


ಪ್ರಜ್ವಲ್ ರೇವಣ್ಣ ತಪ್ಪುಮಾಡಿದ್ದು ಸಾಬೀತಾದಲ್ಲಿ ಜೆಡಿಎಸ್ ಪಕ್ಷದಿಂದ ಯಾವುದೇ ತಕರಾರು ಇರುವುದಿಲ್ಲ.  ಆದರೆ ಅಮಾಯಕ ಹೆಣ್ಣು ಮಕ್ಕಳ ತೇಜೋವಧೆ ಮಾಡಿರುವುದು ಅಕ್ಷಮ್ಯ ಅಪರಾಧ. ಈ ದೇಶದ ಮಾಜಿ ಪ್ರಧಾನಮಂತ್ರಿಗಳು ಹಾಗೂ ಮುತ್ಸದ್ದಿ ರಾಜಕಾರಣಿಯಾದ ಸನ್ಮಾನ್ಯ ಹೆಚ್.ಡಿ. ದೇವೇಗೌಡರ ಕುಟುಂಬವನ್ನು ಮುಳುಗಿಸಲು ಷಡ್ಯಂತರ ರೂಪಿಸಿರುವ ಪ್ರಕರಣದ ರೂವಾರಿ ರಾಜ್ಯದ ಉಪಮುಖ್ಯಮಂತ್ರಿಯಾದ ಡಿ.ಕೆ. ಶಿವಕುಮಾರರವರನ್ನು ಸಂಪುಟದಿಂದ ವಜಾಮಾಡುವಂತೆ ಆಗ್ರಹಿಸುತ್ತೇವೆ. ಹಾಗೂ ಇವರ ಅಡತಿಯಂತೆ ಪೆನ್‌ ಡ್ರೈವ್ ಬಿಡುಗಡೆ ಮಾಡಿದವರನ್ನು ಈವರೆಗೂ ಬಂಧಿಸದೆ ಇರುವ ವಿಶೇಷ ತನಿಖಾದಳದ ಅಧಿಕಾರಿಗಳನ್ನು ತಕ್ಷಣ ಅಮಾನತ್ತು ಪಡಿಸಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಹಾಲಿ ಸುಪ್ರಿಂಕೋರ್ಟ್ ನ್ಯಾಯಾಧೀಶರ ಮುಖಾಂತರ ನಡೆಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಜೆಡಿಎಸ್ ಘಟಕವು ಘನವೆತ್ತ ರಾಜ್ಯಪಾಲರಿಗೆ ಉಪತಹಶೀಲ್ದಾರ್ ನಾಡಕಛೇರಿ ರಿಪ್ಪನ್‌ಪೇಟೆ ಇವರ ಮುಖಾಂತರ ಮನವಿಯನ್ನು ಸಲ್ಲಿಸುತ್ತಿದ್ದೇವೆ. ಸದರಿ ಮನವಿಯನ್ನು ಮಾನ್ಯ ರಾಜ್ಯಪಾಲರಿಗೆ ಮುಂದಿನ ಕ್ರಮಕ್ಕಾಗಿ ಕಳುಹಿಸಿಕೊಡುವಂತೆ ಈ ಮೂಲಕ ಕೋರಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರು ಜಿ.ಎಸ್.ವರದರಾಜ್, ಕೆರೆಹಳ್ಳಿ ಹೋಬಳಿ ಜೆಡಿಎಸ್‌ ಅಧ್ಯಕ್ಷ ರಾಜು ದೂನಾ,ಜೆಡಿಎಸ್‌ ಮುಖಂಡರಾದ.ಸಿ.ಈರಣ್ಣಕಲ್ಲೂರು, ಹರೀಶ್‌ ಬಾಳೂರು,ವಿಶ್ವನಾಥ್, ರಾಜೇಂದ್ರ,ರಾಮಚಂದ್ರ ಹಾಲುಗುಡ್ಡೆ ಇನ್ನಿತರ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ – ಮಳೆಯಲ್ಲೂ ಮುಂದುವರಿದ ಪಾದಯಾತ್ರೆ

ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…

1 hour ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…

18 hours ago

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ – ಆರೋಪಿ ಅರೆಸ್ಟ್!

ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…

18 hours ago

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ

ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…

18 hours ago

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ

ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…

18 hours ago

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ

ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…

1 day ago