Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ
ರಿಪ್ಪನ್‌ಪೇಟೆ : 12 ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತಿ,ಮತ,ಬೇಧ ತೊಡೆದು ಎಲ್ಲಾರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ,ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶ್ರೀ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದ ಪ್ರಮುಖರಾದ ಕಗ್ಗಲಿ ಲಿಂಗಪ್ಪ ಹೇಳಿದರು.
ಪಟ್ಟಣದ ಮಂಜುಶ್ರೀ ಹೊಟೇಲ್ ಆವರಣದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಭಕ್ತವೃಂದದ ವತಿಯಿಂದ ಆಯೋಜಿಸಿದ್ದ 891ನೇ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹಲವಾರು ವರ್ಷಗಳ ಹಿಂದೆಯೇ ಬಸವೇಶ್ವರರು ಸಮಾನತೆಯ ಮೂಲಕ ಸುಭಿಕ್ಷಾ ಸಮಾಜದ ನಿರ್ಮಾಣಕ್ಕಾಗಿ ಹೋರಾಡಿದವರು, ಕಂದಾಚಾರ,ಜಾತೀಯತೆ ಸಮಾಜಕ್ಕೆ ಮಾರಕವೆಂದು ತಿಳಿಹೇಳಿದವರು, ಕಳಬೇಡ,ಕೊಲಬೇಡ ಎಂಬ ಸಪ್ತ ತತ್ವಗಳನ್ನು ಬೋದಿಸಿದವರು ಈ ತತ್ವವನ್ನು ನಾವುಗಳು ಪಾಲಿಸಿದರೆ ಅಪರಾಧ ಮುಕ್ತ ಸಮಾಜ ನಿರ್ಮಾಣ ವಾಗುತ್ತದೆ ಎಂದರು.
ಕಾಯಕಯೋಗಿ ಬಸವೇಶ್ವರ ಜಯಂತಿಯ ಅಂಗವಾಗಿ ಎಲ್ಲಾರಿಗೂ ಸಿಹಿ ಹಂಚಲಾಯಿತು.
ಈ ಸಂಧರ್ಭದಲ್ಲಿ ಮಂಜುಶ್ರೀ ಹೊಟೇಲ್ ನ ಸಿದ್ದೇಶ್ , ಗಣೇಶ್ ,ಮೇಘಾ ,ವಿಜೇತಾ ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದ ರಾಘವೇಂದ್ರ , ಸತೀಶ್ ಹೆಗಡೆ , ಹರೀಶ್ ಹಾಗೂ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್