Ripponpete | ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ : ಶಾಸಕ ಬೇಳೂರು ಗೋಪಾಲಕೃಷ್ಣ

ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು  ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ :ಗೋಪಾಲ ಕೃಷ್ಣ ಬೇಳೂರು

ರಿಪ್ಪನ್‌ಪೇಟೆ : ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಮನೆಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ ಕಾರ್ಡ್ ಉಪ್ಪುಕಾರ ಹಾಕೊಂಡು  ನೆಕ್ಕಿ ಎಂದಿದ್ದವರು ಈಗ ಅದೇ ಬಿಜೆಪಿಯವರೇ ಜೇನುತುಪ್ಪಾ ಹಾಕಿಕೊಂಡು ನೆಕ್ಕುತ್ತಿದ್ದಾರೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.


ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ ಗಳನ್ನು ಅನುಷ್ಠಾನಗೊಳಿಸಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗ್ಯಾರಂಟಿ ಕಾರ್ಡುಗಳನ್ನು ಮನೆಮನೆ  ಗೆ ನೀಡುವ ಸಂದರ್ಭದಲ್ಲಿ ಬಿಜೆಪಿಯ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಅಭಿಮಾನಿಗಳಿಗೆ ಅಪಹಸ್ಯ ಮಾಡಿದ್ದರು. ರಿಪ್ಪನ್ ಪೇಟೆ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಬಜರಂಗದಳದ ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ ಘೋಷಣೆ ಕೂಗಿದ್ದರ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ಠಾಣೆಗೆ ದೂರು ನೀಡಲು ಮುಂದಾಗಿದ್ದು ಆಗ ಬಿಜೆಪಿಯವರೇ ನಮಗೂ ಸಂಘಟನೆಯವರಿಗೂ ಸಂಬಂಧವಿಲ್ಲ ಎಂದು ಬಹಿರಂಗವಾಗಿ ಹೇಳಿಕೊಂಡ ಮೇರೆಗೆ ನಮ್ಮ ಕಾರ್ಯಕರ್ತರು ಬಿಜೆಪಿ ಬಹಿರಂಗ ಸಭೆಯಲ್ಲಿ ಖಾಲಿಚೊಂಬು ಪ್ರದರ್ಶಿಸುವುದನ್ನು ಕೈಬಿಟ್ಟಿದ್ದರು.


ಆದರೆ ಸಂಸದ ಮತ್ತು ಆಭ್ಯರ್ಥಿ ಬಿ.ವೈ.ರಾಘವೇಂದ್ರರವರು ಸಭೆಯಲ್ಲಿ ನಮ್ಮ ಕಾರ್ಯಕರ್ತರೇನು ಬಳೆತೊಟ್ಟಿಲ್ಲ ಎಂದು ಪರೋಕ್ಷವಾಗಿ ಹೇಳಿಕೆ ನೀಡಿರುವದನ್ನು ತೀವ್ರವಾಗಿ ಖಂಡಿಸಿ ಇನ್ನೂ ಮುಂದೆ ರಾಘವೇಂದ್ರರವರು ಈ ರೀತಿಯಲ್ಲಿ ಮಾತನಾಡಿದರೆ ಸರಿಯಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಮಾಜಿ ಶಾಸಕ ಹರತಾಳು ಹಾಲಪ್ಪ  ಬಿಜೆಪಿ ಚುನಾವಣೆಯ ಪ್ರಚಾರ  ಸಭೆಯಲ್ಲಿ ರಿಪ್ಪನ್ ಪೇಟೆ ಪಟ್ಟಣದ  ಸಾಗರ ರಸ್ತೆಯ ಅಭಿವೃದ್ದಿಗೆ ಅನುದಾನ ಹಾಕಿಸಿಕೊಂಡು ಬಂದವನು ನಾನು ಈಗ ಭರದಿಂದ ಕಾಮಗಾರಿ ಸಾಗುತ್ತಿದೆ. ಎಂದು ಸುಳ್ಳು ಭಾಷಣವನ್ನು ಮಾಡುತ್ತಿದ್ದಾರೆ. ಸುಳ್ಳಿನಲ್ಲಿಯೇ ಐದು ವರ್ಷ ಕಾಲಕಳೆದ ಹರತಾಳು ಹಾಲಪ್ಪ ಕ್ಷೇತ್ರದ ಅಭಿವೃದ್ದಿ ಮಾಡದೆ ತನ್ನ ಪಕ್ಷದ ಕಾರ್ಯಕರ್ತರ ಮನೆಗಳ ಮುಂದೆ  100 ಮೀಟರ್ ರಸ್ತೆ ಮಾಡಿದ್ದು ಬಿಟ್ಟರೆ ಇನ್ನೂ ಏನು ಮಾಡಿದ್ದಾನೆಂದು ಬಹಿರಂಗವಾಗಿ ಹೇಳಲಿ ಎಂದರು.

೨೮ ಕ್ಷೇತ್ರ ಗೆಲ್ಲದಿದ್ದರೆ ಅಪ್ಪಮಗ ರಾಜಿನಾಮೆ ನೀಡುತ್ತಾರಾ;-

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬೆ.ಎಸ್.ಯಡಿಯೂರಪ್ಪನವರು ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ೨೮ ಕ್ಷೇತ್ರಗಳನ್ನು ಗೆಲುತ್ತೇವೆಂದು ಹೇಳಿಕೊಳ್ಳುತ್ತಿದ್ದು ಗೆಲ್ಲದಿದ್ದರೆ ಯಡಿಯೂರಪ್ಪ ಮತ್ತು ಮಗ ರಾಜೀನಾಮೆ ಕೊಡುತ್ತಾರಾ ಎಂದು ಕೇಳಿದರು.

ಹಾಲಪ್ಪ ನನ್ನ ಉಡುಪಿನ ಮತ್ತು ಕನ್ನಡಕದ ಬಗ್ಗೆ ಮಾತನಾಡಿ ಈಗ ಬಿಟ್ಟಿದ್ದಾನೆ ಈಗ ಕುಮಾರ ಬಂಗಾರಪ್ಪ ನನ್ನ ಕಡಕ ಮತ್ತು ಉಡುಪಿನ ಬಗ್ಗೆ ಮಾತನಾಡಲು ಅರಂಭಿಸಿದ್ದಾನೆ ಅವನ ಬಾಯಿಗೆ ಬೀಗ ಹಾಕುವ ಕಾಲ ದೂರವಿಲ್ಲ ಎಂದರು.
ಸುದ್ದಿಗೋಷ್ಟಿಯಲ್ಲಿ ಬಂಡಿ ರಾಮಚಂದ್ರ ,ಹೆಚ್.ವಿ.ಈಶ್ವರಪ್ಪಗೌಡ, ಅಮೀರ್ ಹಂಜಾ , ಪರಮೇಶ್, ಧನಲಕ್ಷ್ಮೀ ,ಸಾಕಮ್ಮ,ಎನ್.ಚಂದ್ರೇಶ್ , ಉಲ್ಲಾಸ್,ಕೆರೆಹಳ್ಳಿ ರವೀಂದ್ರ, ಉಮಾಕರ್, ರಮೇಶ್‌ಪ್ಯಾನ್ಸಿ, ನವೀನ ಕೆರೆಹಳ್ಳಿ ಇನ್ನಿತರ ಪಕ್ಷದ ಮುಖಂಡರು ಹಾಜರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

9 hours ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

9 hours ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

1 day ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

1 day ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

1 day ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

2 days ago