Ripponpete | ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು
ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು.
ಪಟ್ಟಣದ ಗವಟೂರು, ಬರುವೆ ಹಾಗೂ ಕೆರೆಹಳ್ಳಿ ವಾರ್ಡ್ ಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮತ ಯಾಚಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಜಿಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ಗೀತಾ ಶಿವರಾಜ್‌ಕುಮಾರ್ ಅವರು ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎನಿಸಿಕೊಂಡಿದ್ದ ರಾಜ್‌ಕುಮಾರ್ ಸೊಸೆ ಹಾಗೂ ಮಲೆನಾಡಿನ ಕಣ್ಮಣಿ ರಾಜಕಾರಣಿ ಬಂಗಾರಪ್ಪ ಅವರ ಪುತ್ರಿ. ಇವರು ಚುನಾವಣೆಗೆ ಸ್ಪರ್ಧಿಸಿರುವುದು ಸೌಭಾಗ್ಯವಾಗಿದೆ ಅವರಿಗೆ ಮತ ಹಾಕುವ ಮೂಲಕ ಬಂಗಾರಪ್ಪ ನವರ ಋಣ ತೀರಿಸುವ ಸಮಯ ಬಂದಿದೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಅವರು ಕಸ್ತೂರಿ ರಂಗನ್ ವರದಿಗೆ ವಿರೋಧ ವ್ಯಕ್ತಪಡಿಸದೇ, ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರದ ಜನತೆಗೆ ದ್ರೋಹ ಬಗೆದಿದ್ದಾರೆ. ಇದರಿಂದ ಸಾವಿರಾರು ರೈತರ ಸಾಗುವಳಿ ಜಮೀನಿಗೆ ಹಕ್ಕುಪತ್ರ ದೊರೆಯದಂತಾಗಿದೆ ಎಂದು ಆಪಾದಿಸಿದರು.
ಈ ಸಂಧರ್ಭದಲ್ಲಿ ಮುಖಂಡರುಗಳಾದ ಎಂ ಎಂ ಪರಮೇಶ್ ,ಆಸೀಫ಼್ ಭಾಷಾ , ರವೀಂದ್ರ ಕೆರೆಹಳ್ಳಿ , ರಮೇಶ್ ಫ್ಯಾನ್ಸಿ , ಲೇಖನಾ ಚಂದ್ರನಾಯ್ಕ್ ಹಾಗೂ ಇನ್ನಿತರರಿದ್ದರು.