Ripponpete | ಮಾರುತಿ ಓಮಿನಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ
ರಿಪ್ಪನ್‌ಪೇಟೆ : ಇಲ್ಲಿನ 18ನೇ ಮೈಲಿಕಲ್ಲು ಸಮೀಪದಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಚಾಲಕನ ಕಾಲು ಮುರಿದಿರುವ ಘಟನೆ ಗುರುವಾರ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಕಲ್ಲುಕೊಪ್ಪ ಗ್ರಾಮದ ಸತೀಶ್ ಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.
18ನೇ ಮೈಲಿಕಲ್ಲಿನ ಬಳಿಯಲ್ಲಿ ಮಾರುತಿ ಓಮಿನಿ ಕಾರು ಹಾಗೂ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನ ಕಾಲು ಜಖಂ ಆಗಿದ್ದು ತೀವ್ರತರವಾದ ರಕ್ತಸ್ರಾವವಾಗಿದೆ.
ಕೂಡಲೇ ಸ್ಥಳೀಯರು ಆಂಬುಲೆನ್ಸ್ ನಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ಸಿಬ್ಬಂದಿಗಳು ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.