Headlines

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

SSLC ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ


ತೀರ್ಥಹಳ್ಳಿ : ಕಳೆದ ವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ 615 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಅಭಿನಂದಿಸಿದ್ದಾರೆ.


ಪಟ್ಟಣದ ಬೆಟ್ಟಮಕ್ಕಿಯ ಶಿಕ್ಷಕ ದಂಪತಿಗಳಾದ ದಾನೇಶ ಮತ್ತು ನಾಗರತ್ನ ಅವರ ಪುತ್ರಿ ರಜತಾ ರವರನ್ನು ಅವರ ಸ್ವಗೃಹಕ್ಕೆ ತೆರಳಿ ಅಭಿನಂದಿಸಿದರು

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 620 ಅಂಕಗಳನ್ನು ಪಡೆದು ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದು ತಾಲೂಕಿಗೆ ಕೀರ್ತಿ ತಂದ ಯಡೆಹಳ್ಳಿಕೆರೆಯ ಷಣ್ಮುಗಂ ಹಾಗೂ ಆಶಾ ದಂಪತಿಗಳ ಪುತ್ರಿ ವಾಗ್ದೇವಿ ಶಾಲೆಯ ವಿದ್ಯಾರ್ಥಿನಿ ಛಾಯ ಅವರ ಮನೆಗೆ ಮಂಗಳವಾರ ಮಾಜಿ ಗೃಹ ಸಚಿವ, ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ತೆರಳಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದರು.

About The Author

Leave a Reply

Your email address will not be published. Required fields are marked *