SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್
ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವ್ಯಾಸಾಂಗ ಮಾಡಿದ್ದು ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈಯುವ ಮೂಲಕ ಹೊಸನಗರ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಸಮೀಕ್ಷಾ ಆರ್ ನಾಯಕ್ ಪಡೆದಿರುವ ಅಂಕಗಳ ವಿವರ :
ಕನ್ನಡ – 125,
ಇಂಗ್ಲಿಷ್ -100
ಹಿಂದಿ -100
ಗಣಿತ-99
ಸಮಾಜ ವಿಜ್ಞಾನ-98
ವಿಜ್ಞಾನ – 98
ಒಟ್ಟು 625 ಕ್ಕೆ 620 ಅಂಕ ಪಡೆದಿದ್ದಾರೆ.
ಸಮೀಕ್ಷಾ ಆರ್ ನಾಯಕ್ ರವರಿಗೆ ಶಾಲಾ ಶಿಕ್ಷಕರು, ಗ್ರಾಮಸ್ಥರು ಅಭಿನಂದನೆಗಳನ್ನು ತಿಳಿಸಿದ್ದಾರೆ.
SSLC ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಸಮೀಕ್ಷಾ ಆರ್ ನಾಯಕ್ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ವತಿಯಿಂದ ಅಭಿನಂದನೆಗಳು…….
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್