SSLC ಫಲಿತಾಂಶ ಪ್ರಕಟ | ಶಿವಮೊಗ ಜಿಲ್ಲೆಗೆ ದಾಖಲೆಯ ಫಲಿತಾಂಶ
ಎಸ್ಸೆಸ್ಸೆಲ್ಸಿ ಪರೀಕ್ಷೆ ರಿಸೆಲ್ಟ್ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ದಾಖಲೆ ಫಲಿತಾಂಶ ಪಡೆದಿದೆ. ರಾಜ್ಯಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ.
ಶೇ.94ರಷ್ಟು ಫಲಿತಾಂಶ ಪಡೆದು ಉಡುಪಿ ಶೈಕ್ಷಣಿಕ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಶೇ.88.67ರಷ್ಟು ಫಲಿತಾಂಶ ಪಡೆದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೆ ಸ್ಥಾನ ಪಡೆದಿವೆ.
ಶಿವಮೊಗ್ಗ ಜಿಲ್ಲೆಯಲ್ಲಿ 23,028 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,420 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹಾಗಾಗಿ ಜಿಲ್ಲೆಗೆ ಶೇ.88.67ರಷ್ಟು ಫಲಿತಾಂಶ ದೊರೆತಿದೆ. ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಪಡೆದಿದೆ. ಕಳೆದ ಬಾರಿ ಶಿವಮೊಗ್ಗ ಜಿಲ್ಲೆ 28ನೇ ಸ್ಥಾನದಲ್ಲಿತ್ತು.
ರಾಜ್ಯಾದ್ಯಂತ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.
ರಾಜ್ಯಾದ್ಯಂತ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ವತಿಯಿಂದ ಮಾರ್ಚ್ 25 ಮತ್ತು ಏಪ್ರಿಲ್ 6ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಫಲಿತಾಂಶ ಹೊರ ಬಿದ್ದಿದೆ. ಈ ಪೈಕಿ ಬಾಗಲೋಕೋಟೆಯ ಅಂಕಿತಾ ರಾಜ್ಯಕ್ಕೆ ಟಾಪರ್. 625ಕ್ಕೆ 625 ಅಂಕ ಪಡೆದುಕೊಂಡಿದ್ದಾಳೆ.