ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing
ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲೆಂದು ರೈಲು ಹತ್ತಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ ಶಾಂತಿನಗರದ ನಿವಾಸಿ ಐಶ್ವರ್ಯ (19) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡುತ್ತಿದ್ದರು.
ಮೇ 15 ರಂದು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಯಶವಂತಪುರಕ್ಕೆ ಹೋಗುವ ಎಕ್ಸ್’ಪ್ರೆಸ್ ರೈಲಿನಲ್ಲಿ (train) ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಬೆಂಗಳೂರಿನಲ್ಲಿ ಕೆಲಸ ಮಾಡುವ ಸ್ಥಳಕ್ಕೆ ತೆರಳದೆ ಕಣ್ಮರೆಯಾಗಿದ್ದಾರೆ.
ಯುವತಿ ಪೇಂಟ್ ಗ್ರೀನ್ ಕಲರ್ ಟಾಪ್, ಕ್ರೀಮ್ ಬಣ್ಣದ ಪ್ಯಾಂಟ್, ಕ್ರೀಮ್ ಬಣ್ಣದ ದುಪ್ಪಟ್ಟಾ ಧರಿಸಿದ್ದು ಕನ್ನಡದಲ್ಲಿ ಮಾತನಾಡಬಲ್ಲರು.
ಯುವತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08182-222974/ 9480802124ಕ್ಕೆ ಸಂಪರ್ಕಿಸಿ ಎಂದು ರೈಲ್ವೆ ಸಬ್ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.