ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC
ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಿಪ್ಪನ್‌ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಒಟ್ಟು 35 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು 13 ಕ್ಷೇತ್ರದಿಂದ 35 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಡಿದ್ದು ಜೂ.22 ರಂದು ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾಗಿದೆ.
ಹೊಸನಗರ ಕ್ಷೇತ್ರದಿಂದ ಎಂ ಎಂ ಪರಮೇಶ್ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಈ ಕ್ಷೇತ್ರಕ್ಕೆ ನಾಲ್ಕನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಿಪ್ಪನ್‌ಪೇಟೆ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿದ್ದು ನಾಲ್ಕನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಆರ್ ಎಂ ಮಂಜುನಾಥ್ ಗೌಡರವರ ಕೈ ಬಲಪಡಿಸಿದಂತಾಗಿದೆ.
ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಎಂ ಎಂ ಪರಮೇಶ್ ರವರಿಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ,ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ,ಮುಖಂಡರಾದ ಅಮೀರ್ ಹಂಜಾ , ಈಶ್ವರಪ್ಪ ಗೌಡ ,ರಿಪ್ಪನ್‌ಪೇಟೆ ಘಟಕದ ಕಾಂಗ್ರೆಸ್ ಅಧ್ಯಕ್ಷ ಗಣಪತಿ ಗವಟೂರು, ಆಸೀಫ಼್ ಭಾಷಾ , ಜಿ ಆರ್ ಗೋಪಾಲಕೃಷ್ಣ, ಎನ್ ಪಿ ರಾಜು ,ಮಂಜುನಾಥ್ ಭಂಡಾರಿ ರಿಪ್ಪನ್‌ಪೇಟೆ ಹಾಗೂ ಇನ್ನಿತರರು ಶುಭಾಶಯ ಕೋರಿದ್ದಾರೆ.