ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ
ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ
ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಬಳಿ ಕೆಲಸಕ್ಕೆ ಹೋಗಬೇಡ ಎಂದು ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ.
ಶುಕ್ರರಾಜ್ ಯಾನೆ ಅಲಿಯಾಸ್ ಶುಕ್ರ(50) ಕೊಲೆಯಾದ ವ್ಯಕ್ತಿ. ತಾಯಿ ಶಿಲ್ಪಾ ಗ್ರಾಮ ಪಂಚಾಯಿತಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದರು. ಮಹಿಳೆಯ ದುಡಿಮೆಯಿಂದ ಮನೆ ನಡೆಯುತ್ತಿತ್ತು. ಶುಕ್ರರಾಜ್ ಯಾನೆ ಶಿಲ್ಪ ಬಳಿಯಲ್ಲಿ ಜಗಳ ಮಾಡುತ್ತಿದ್ದ. ಕೆಲಸಕ್ಕೆ ಹೋಗುವುದನ್ನು ಬಿಡು ಎನ್ನುತ್ತಿದ್ದ. ಇದರಿಂದ ಕುಟುಂಬ ನಿರ್ವಹಣೆ ಕಷ್ಟವಾಗುತ್ತಿತ್ತು ಎಂದು ಮಹಿಳೆ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.
ಘಟನೆ ನಡೆದ ದಿನವೂ ಕೆಲಸಕ್ಕೆ ಹೋಗದಂತೆ ಶುಕ್ರರಾಜ್ ಹೇಳಿದ್ದಾರೆ. ಆದರೆ, ಪತಿಯ ಮಾತನ್ನ ನಿರ್ಲಕ್ಷಿಸಿ ಕೆಲಸಕ್ಕೆ ಹೋಗುವುದಾಗಿ ಪತ್ನಿ ಹೇಳಿದ್ದಾಳೆ. ಮಾತು ಕೇಳದ ಹಿನ್ನೆಲೆಯಲ್ಲಿ ಇಬ್ಬರ ಮಧ್ಯೆ ಜಗಳವಾಗಿದೆ. ಈ ಸಂದರ್ಭದಲ್ಲಿ ತಾಯಿ ಮಗನಿಗೆ ಕರೆ ಮಾಡಿ ಹೇಳಿದ್ದಾರೆ. ಕೋಪಗೊಂಡು ಮನೆಗೆ ಬಂದ ಮಗ ತಂದೆಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವದಲ್ಲಿ ಒದ್ದಾಡಿದ್ದ ಶುಕ್ರರಾಜ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಕೊಲೆ ಮಾಡಿದ ಅಪ್ರಾಪ್ತನನ್ನು ಹೊಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಶುಕ್ರರಾಜ್ ಯಾನೆ ಕೃಷಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ. ಆದರೆ, ಮಗ ಕಾಲೇಜಿಗೂ ಹೋಗದೆ, ಕೆಲಸಕ್ಕೂ ಹೋಗದೆ ಪುಡಾರಿಯಾಗಿ ಸುತ್ತಾಡುತ್ತಿದ್ದ ಎನ್ನಲಾಗಿದೆ.
25 ವರ್ಷದ ಹಿಂದೆ ಶಿಲ್ಪ ಮತ್ತು ಶುಕ್ರ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ದಂಪತಿಗಳಿಗೆ ಇಬ್ವರು ಮಕ್ಕಳಿದ್ದಾರೆ. ಮೂರು ವರ್ಷದ ಹಿಂದೆ ಪಂಚಾಯಿತಿ ಕೆಲಸಕ್ಕೆ ಹೋಗುತ್ತಿದ್ದ ಪತ್ನಿಯ ವಿರುದ್ಧ ಶುಕ್ರ ವಿರೋಧ ಮಾಡುತ್ತಿದ್ದ. ಹೀಗಾಗಿ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಆದರೆ, ಶುಕ್ರವಾರ ಬಂದು ಕೆಲಸಕ್ಕೆ ಹೋಗಬೇಡ ಎಂದು ಜಗಳವಾಡಿದ್ದಾನೆ. ಅದು ಕೊಲೆಯಲ್ಲಿ ಅಂತ್ಯವಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply