ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ


ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ ಬಗ್ಗೆ ಗೌರವವಿದೆ. ನಮ್ಮ ಸಂಪೂರ್ಣ ಬೆಂಬಲ ಕೂಡ ಇದೆ. ನಿಮ್ಮನ್ನು ಖಾಯಂ ಗೊಳಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯೂ ಆಗಿದೆ ಎಂಬುದಾಗಿ ಘೋಷಿಸಿದರು.

ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರನ್ನು ತರಲಾಗಿದೆ. ಇಲ್ಲಿನ ಅನೇಕ ಅಂಗನವಾಡಿ ಕಾರ್ಯಕರ್ತೆಯರು ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2000 ರೂ ಪಡೆಯುತ್ತಿದ್ದೀರಿ ಎಂದರು.

ಡೆಂಗ್ಯೂ ನಿಯಂತ್ರಣ ಕ್ರಮ ವಹಿಸಬೇಕು. ನಿಮ್ಮೆಲ್ಲರ ಸಹಕಾರದಿಂದ ಸಾಗರ ತಾಲೂಕಿನಲ್ಲಿ ಡೆಂಗ್ಯೂ ನಿಯಂತ್ರಣವಾಗಬೇಕು. ಆ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿ ಕೆಲಸ ಮಾಡುವಂತೆ ತಿಳಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಲಾಗುತ್ತಿದೆ. ನಿಮ್ಮನ್ನೇ ಅಲ್ಲಿ ಶಿಕ್ಷಕರಾಗಿ ನೇಮಿಸೋದಕ್ಕೆ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹಮತ ವ್ಯಕ್ತಪಡಿಸಿದ್ದಾರೆ. ನಿಮ್ಮನ್ನೇ ಅಂಗನವಾಡಿಗಳಲ್ಲಿ ಪ್ರಾರಂಭವಾಗುವಂತ LKG, UKG ಶಾಲೆಗಳಿಗೆ ಶಿಕ್ಷಕರನ್ನಾಗಿ ನೇಮಿಸುವಂತ ಆದೇಶ ಮಾಡುವುದು ಮಾತ್ರ ಬಾಕಿಯಿದೆ ಎಂದರು.

ಅಂಗನವಾಡಿ ಕಟ್ಟಡಗಳು ದುರಸ್ಥಿಯಲ್ಲಿದ್ದರೇ ಕೂಡಲೇ ನನ್ನ ಗಮನಕ್ಕೆ ತರಬೇಕು. ಶಿಥಿಲಾವಸ್ಥೆಯಲ್ಲಿರುವಂತ ಅಂಗನವಾಡಿಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಪಾಠ ಮಾಡಬೇಡಿ. ಪರ್ಯಾಯ ಕಟ್ಟಡದಲ್ಲಿ ವ್ಯವಸ್ಥೆ ಮಾಡಿಕೊಂಡು ನಡೆಸುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚಿಸಿದರು.

ಮುಂದಿನ ದಿನಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವ ಕೂಗಿಗೆ ನನ್ನ ಬೆಂಬಲವಿದೆ. ನಿಮ್ಮ ಜೊತೆಗೆ ಹೋರಾಟದಲ್ಲಿ ನಾನು ಭಾಗಿಯಾಗುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಾಗರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ, ಉಪ ವಿಭಾಧಿಕಾರಿ ಯತೀಶ್, ಕಾರ್ಯನಿರ್ವಹಣಾಧಿಕಾರಿ ಶಣೈ, ಟಿಹೆಚ್‌ಓ ಡಾ.ಭರತ್, ಸಾಗರ ನಗರಸಭೆಯ ಸದಸ್ಯರು ಸೇರಿದಂತೆ ಇತರರು ಹಾಜರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

4 hours ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

4 hours ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

6 hours ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

1 day ago

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…

1 day ago

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ

ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…

1 day ago