ಅಬ್ಬರಿಸಿ ಬೊಬ್ಬಿರಿದರೇ ಇಲ್ಯಾರಿಗೂ ಭಯವಿಲ್ಲ | ಶಿವಣ್ಣ ಅಭಿಮಾನಿಗಳಿಂದ ಮನೆ ಮೇಲೆ ಮುತ್ತಿಗೆ ಬೆನ್ನಲ್ಲೇ ಮತ್ತೊಂದು ಪೋಸ್ಟ್ ಮೂಲಕ ಟಾಂಗ್ ಕೊಟ್ಟ ಕುಮಾರ್ ಬಂಗಾರಪ್ಪ | shivanna-kumar
ಚಲನಚಿತ್ರ ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆಂದು ಶಿವಣ್ಣ ಅಭಿಮಾನಿಗಳು ಬೆಂಗಳೂರಿನಲ್ಲಿರುವ ಮಾಜಿ ಸಚಿವ ಕುಮಾರ್ ಬಂಗಾರಪ್ಪನವರ ಮನೆ ಮೇಲೆ ಮುತ್ತಿಗೆ ಹಾಕಿರುವ ಬೆನ್ನಲ್ಲೇ ಕುಮಾರ್ ಬಂಗಾರಪ್ಪ ಸಾಮಾಜಿಕ ಜಾಲತಾಣದಲ್ಲಿ ಮತ್ತೊಂದು ಪೋಸ್ಟ್ ಹಾಕುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಸಂಸದ ಬಿ.ವೈ.ರಾಘವೇಂದ್ರ ರವರಿಗೆ ಎಕ್ಸ್ ಖಾತೆ ಮತ್ತು ಫೇಸ್ ಬುಕ್ ನಲ್ಲಿ ಅಭಿನಂದನೆ ಸಲ್ಲಿಸಲು ಪೋಸ್ಟ್ ಹಾಕಿರುವ ಕುಮಾರ್ ಬಂಗಾರಪ್ಪ ಅದಕ್ಕೆ ಒಂದಿಷ್ಟು ಮುಂಬರಹ ಸೇರಿಸಿ ಟಾಂಗ್ ಕೊಟ್ಟಿದ್ದಾರೆ.
ಸಹೋದರಿ ಗೀತಾ ಶಿವರಾಜ್ ಕುಮಾರ್, ಭಾವ ಡಾ.ಶಿವರಾಜ್ ಕುಮಾರ್ ಹಾಗೂ ಸಚಿವ ಮಧು ಬಂಗಾರಪ್ಪನವರಿಗೆ ಟಾಂಗ್ ನೀಡಿ ಪೋಸ್ಟ್ ಮಾಡಿದ್ದರೂ ಮೂವರ ಹೆಸರು ಬಳಕೆ ಮಾಡಿಕೊಂಡಿಲ್ಲ. ಯಾರ ಹೆಸರು ಹೇಳದೆ ಇರುವುದರಿಂದ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಗಳು ಕುತೂಹಲ ಮೂಡಿಸಿದೆ.
ಪೋಸ್ಟ್ ನಲ್ಲೇನಿದೆ..??
ಬಬ್ರುವಾಹನ: ಅಬ್ಬರಿಸಿ ಬೊಬ್ಬರಿದರೆ ಇಲ್ಲಿ ಯಾರಿಗೂ ಭಯವಿಲ್ಲ ಎಂಬ ಪೋಸ್ಟ್ ನ ಹೆಡ್ ಲೈನ್ ಮತ್ತು ಬಿ.ವೈ.ಆರ್ ಅವರಿಗೆ ಹೃದಯ ಪೂರಕ ಅಭಿನಂದನೆಯ ಪೋಸ್ಟ್ ಮೇಲುಗಡೆ, ‘ಹೆದರಿಸುವ, ಬೆದರಿಸುವ, ಹುಷಾರ್ ಎನ್ನುವ ಮಾತುಗಳು ಏನೇ ಇದ್ದರು ಗಂಟಲಿನ ಒಳಗೆ, ನಾಲ್ಕು ಗೋಡೆಗಳ ಒಳಗೆ, ತಮ್ಮಪಟಾಲಂಗಳ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು.
ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು ಎಂದು ಎಕ್ಸ್ ಮತ್ತು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್