ಊಟಕ್ಕೆ ಬಂದ ಗ್ರಾಹಕನ 4 ಲಕ್ಷ ರೂ ಇದ್ದ ಬ್ಯಾಗ್ ಎಗರಿಸಿ ಓಡಿದ ಸಪ್ಲೈಯರ್ – ಬ್ರೈಟ್ ಹೊಟೇಲ್ ನಲ್ಲಿ ನಡೆದಿದ್ದೇನು..???
ಶಿವಮೊಗ್ಗ ನಗರದ ಬ್ರೈಟ್ ಹೊಟೆಲಿನಲ್ಲ್ಲಿ ಗ್ರಾಹಕ ಬಿಟ್ಟು ಹೋದ 4 ಲಕ್ಷ ರೂ. ಇದ್ದ ಹಣದ ಚೀಲವನ್ನು ಅಲ್ಲಿನ ಸರ್ವರ್ ಎತ್ತಿಕೊಂಡು ಹೋದ ಘಟನೆ ಸಂಭವಿಸಿದ್ದು, ಆತನನ್ನು ಬಂಧಿಸಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಗರ ತಾಲೂಕು ಜಂಬಾನಿ ಗ್ರಾಮದ ವಾಸಿ ಲೋಕೇಶ್ ಎನ್ನುವವರು ತನ್ನ ಸ್ನೇಹಿತನೊಂದಿಗೆ ಹೋಟೇಲ್ ನಲ್ಲಿ ಊಟ ಮಾಡುತ್ತಿದ್ದಾಗ 4 ಲಕ್ಷ ರೂ.ಇದ್ದ ಚೀಲವನ್ನು ಟೇಬಲ್ ಮೇಲೆ ಇಟ್ಟಿದ್ದರು.
ಅವಸರದಲ್ಲಿ ಚೀಲವನ್ನು ಅಲ್ಲಿಯೇ ಬಿಟ್ಟು ಹೋಗಿದ್ದರು. ಸ್ವಲ್ಪ ಸಮಯದ ನಂತರ ಕಾರಿನಲ್ಲಿ ಬ್ಯಾಗ್ ಇಲ್ಲದೇ ಇರುವುದು ಕಂಡುಬಂದಿದ್ದು, ವಾಪಾಸ್ ಹೋಟೇಲ್ ಗೆ ಬಂದು ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಹೋಟೇಲ್ ನಲ್ಲಿ ಸರ್ವರ್ ಕೆಲಸ ಮಾಡುವ ಹೇಮಂತ್ ಕುಮಾರ್ ಎಂಬುವವನು ಬ್ಯಾಗ್ ನ್ನು ತೆಗೆದು ನೋಡಿ ಸ್ಟೋರ್ ರೂಮಿನಲ್ಲಿ ಇಡುವ ದೃಶ್ಯಾವಳಿ ಕಂಡುಬಂದಿತು.
ಪೋನ್ ಮಾಡಿ ಆತನಿಗೆ ಹಣದ ಬ್ಯಾಗ್ ನ ಬಗ್ಗೆ ವಿಚಾರ ಮಾಡಿದಾಗ ಯಾವುದೇ ಬ್ಯಾಗ್, ನಗದು ಹಣ ನಾನು ತೆಗೆದುಕೊಂಡಿಲ್ಲವೆಂದು ಹೇಳಿ ಪೋನ್ ಕಟ್ ಮಾಡಿದ್ದನು. ಅಲ್ಲದೆ ಬೆಳಿಗ್ಗೆ ಹೊಟೇಲ್ ನ ಕೆಲಸಕ್ಕೂ ಕೂಡ ಬಂದಿಲಯರಲಿಲ್ಲ. ಆದ್ದರಿಂದ ನಗದು ಹಣ ಕಳ್ಳತನ ಮಾಡಿಕೊಂಡು ಹೋದ ಹೇಮಂತ್ ಕುಮಾರ್ ಈತನ ಮೇಲೆ ಪ್ರಕರಣ ದಾಖಲಿಸಿದ್ದರು.
Shivamogga Police ಪೊಲೀಸರ ತಂಡವು ಪ್ರಕರಣದ ಆರೋಪಿತ ಹೇಮಂತ್ ಕುಮಾರ್ ಅಲಿಯಾಸ್ ಹೇಮಂತ್ (40) ಈತ ವಾಸವಿರುವ ಅಶೋಕನಗರ ದ ಮನೆಗೆ ತೆರಳಿ ದಸ್ತಗಿರಿ ಮಾಡಿ, ಆತನಿಂದ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್