ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident
(Sagara-anandapura) ಸಾಗರ – ಆನಂದಪುರದ ಹೆದ್ದಾರಿಯಲ್ಲಿ ಮಾರುತಿ ಓಮ್ನಿ(omini) ಹಾಗೂ ಟಾಟಾ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಧೈವಿಯಾಗಿದ್ದಾರೆ.
ಉಳ್ಳೂರು ಸಮೀಪದ ಮಂಚಾಲೆ ಗ್ರಾಮದ ಸಮೀಪದಲ್ಲಿ ಈ ದುರ್ಘಟನೆ ನಡೆದಿದ್ದು ಸಾಗರದ ಟೌನ್ ನಿವಾಸಿ ಸೈಯದ್ ನೂರುಲ್ಲಾ ಎಂಬುವವನು ಉಳ್ಳೂರು ಗ್ರಾಮದ ಕಡೆಯಿಂದ ಸಾಗರ ಕಡೆಗೆ ತೆರಳುತಿದ್ದ ವೇಳೆ ಮಂಚಾಳೆ ಸಮೀಪದಲ್ಲಿ ಓಮಿನಿ ಕಾರಿಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಮಾರುತಿ ಓಮಿನಿಯಲ್ಲಿದ್ದ ಭದ್ರಾವತಿ ನಿವಾಸಿ ಅಜಯ್ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಉಲ್ಲಾಸ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗಕ್ಕೆ ರವಾನಿಸಲಾಗಿದೆ.ಇಂಡಿಕಾ ಕಾರ್ ನಲ್ಲಿದ್ದ ಸೈಯದ್ ನೂರುಲ್ಲಾ ರವರಿಗೂ ತೀವ್ರ ಪೆಟ್ಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂದಪುರ ಪೊಲೀಸರು ಸ್ಥಳಕ್ಕೆ ತೆರಳಿ ಮುಂದಿನ ತನಿಖೆ ಕೈಗೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್