ಕಟ್ಟಡ ಕಾಮಗಾರಿ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು | ಇಂಜಿನಿಯರ್ ಹಾಗೂ ಮೇಸ್ತ್ರಿ ವಿರುದ್ದ ದೂರು ದಾಖಲು | electric shock
ಕರೆಂಟ್ ಶಾಕ್ನಿಂದ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್ನಲ್ಲಿ ನಡೆದಿದೆ.
ಹರೀಶ್(32) ಮೃತಪಟ್ಟ ದುರ್ಧೈವಿಯಾಗಿದ್ದಾನೆ
ಮನೆ ಕಟ್ಟಡದ ಕೆಲಸಕ್ಕೆ ತೆರಳಿದ್ದ ಯುವಕ ಕೆಲಸವನ್ನು ಮುಗಿಸಿ ಹೊರಟಿದ್ದ ಕಾರ್ಮಿಕನಿಗೆ ಕಟ್ಟಡದ ಮೇಸ್ತ್ರಿ ಸಿಮೆಂಟ್ ಮಿಕ್ಸಿಂಗ್ ಯಂತ್ರವನ್ನ ಕ್ಲೀನ್ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಆತ ಕ್ಲೀನ್ ಮಾಡಲು ಹೋದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ.
ಮಳೆಯಿಂದ ಮಿಕ್ಸಿಂಗ್ ಯಂತ್ರ ಗ್ರೌಂಡ್ ಆಗಿ ಕರೆಂಟ್ ಶಾಕ್ ಹೊಡೆಯುತ್ತಿತ್ತು. ಇದನ್ನ ಗಮನಿಸದ ಯುವಕ ಸಿಮೆಂಟ್ ಮಿಕ್ಸಿಂಗ್ ಯಂತ್ರಕ್ಕೆ ಕೈ ಹಾಕಿದ್ಧಾನೆ. ಅಲ್ಲಿಯೇ ಆತ ಕರೆಂಟ್ ಶಾಕ್ನಿಂದ ಸಾವನ್ನಪ್ಪಿದ್ದಾನೆ. 10 ವರ್ಷದಿಂದ ಗಾರೆ ಕೆಲಸ ಮಾಡಿಕೊಂಡಿದ್ದ ಹರೀಶ್ ಗೆ ಮದುವೆ ನಿಶ್ಚಯವಾಗಿತ್ತು ಎನ್ನಲಾಗಿದ್ದು,
ಘಟನೆ ಸಂಬಂಧ ಇಂಜಿನಿಯರ್ ಹಾಗೂ ಮೇಸ್ತ್ರಿ ನಿರ್ಲಕ್ಷ್ಯದ ವಿರುದ್ದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್