ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ
ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು
ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ.
ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27), ಕಡೇಕಲ್ ನಿವಾಸಿಗಳಾದ ಶೋಹೇಬ್ ಯಾನೆ ಚೂಡಿ (24) ಹಾಗೂ ಮಹಮ್ಮದ್ ಜಫ್ರುಲ್ಲಾ (24) ಶಿಕ್ಷೆಗೊಳಗಾದವರೆಂದು ಗುರುತಿಸಲಾಗಿದೆ.
ಶಿಕ್ಷೆಯ ಜೊತೆಗೆ ಅಪರಾಧಿಗಳಿಗೆ ತಲಾ 1,05,000 ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 1 ವರ್ಷ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ. ಎಂ. ಅವರು ವಾದ ಮಂಡಿಸಿದ್ದರು.
ಪ್ರಕರಣದ ವಿವರ :
11-12-2021 ರಂದು ಆಂಧ್ರಪ್ರದೇಶದಿಂದ ನಗರಕ್ಕೆ ಗಾಂಜಾ ಸಾಗಾಣೆ ಮಾಡಲಾಗುತ್ತಿದೆ ಎಂಬ ಖಚಿತ ವರ್ತಮಾನ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರಿಗೆ ಲಭಿಸಿತ್ತು. ಇದರ ಆಧಾರದ ಮೇಲೆ ಅಂದಿನ ಠಾಣೆ ಇನ್ಸ್’ಪೆಕ್ಟರ್ ದೀಪಕ್ ಎಂ. ಎಸ್. ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆಗಿಳಿದಿತ್ತು.
ಲಕ್ಕಿನಕೊಪ್ಪ ಕ್ರಾಸ್ ಬಳಿಯ ಹಾಲ್ ಲಕ್ಕವಳ್ಳಿ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರನ್ನು ತಡೆದು ಪರಿಶೀಲಿಸಿದ್ದರು. ಈ ವೇಳೆ ಕಾರಿನ ಸ್ಟೆಪ್ನಿ, ಹಿಂಭಾಗ ಹಾಗೂ ಮುಂಭಾಗದ ಡೋರ್ ಗಳು ಮತ್ತು ಬಾನೆಟ್ ನ ಒಳಗೆ ಗಾಂಜಾ ಪ್ಯಾಕೇಟ್ ಗಳು ದೊರೆತಿದ್ದವು. 6,50,000 ರೂ. ಮೌಲ್ಯದ 21 ಕೆ.ಜಿ. 315 ಗ್ರಾಂ ತೂಕ ಗಾಂಜಾ, ಕಾರನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ನಂತರ ಸದರಿ ಪ್ರಕರಣದ ಕುರಿತಂತೆ ಆಗಿನ ಸಬ್ ಇನ್ಸ್’ಪೆಕ್ಟರ್ ಭಾರತಿ, ಬಿ ಹೆಚ್. ಅವರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ದಾಖಲಿಸಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್