ಶಿವಮೊಗ್ಗ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ತುಂಗ ನಗರ ಪೊಲೀಸರು ಆತನಿಂದ 2 ಕೆಜಿ 214 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಾಗೇಶ ನಾಯ್ಕ, 29 ವರ್ಷ, ಲಕ್ಷ್ಮಿಪುರ ಹೊಸಳ್ಳಿ ತಾಂಡಾ, ಶಿವಮೊಗ್ಗ ಈತನನ್ನು ಬಂಧಿಸಿ ಆರೋಪಿಯಿಂದ ಅಂದಾಜು ಮೌಲ್ಯ 88,560/- ರೂಗಳ 2 ಕೆಜಿ 214 ಗ್ರಾಂ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ.
ದಿನಾಂಕ:-21-06-2024 ರಂದು ಮದ್ಯಾಹ್ನ ಶಿವಮೊಗ್ಗ ಟೌನ್ ಓತಿಘಟ್ಟದಿಂದ ದುಮ್ಮಳ್ಳಿ ಕಡೆಗೆ ಹೋಗುವ ರಸ್ತೆಯ ಪಕ್ಕ ರುದ್ರಭೂಮಿಯ ಹತ್ತಿರ ಬೈಕ್ ನಿಲ್ಲಿಸಿಕೊಂಡು, ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ತುಂಗನಗರ ಪೊಲೀಸರಿಗೆ ಖಚಿತ ಮಾಹಿತಿ ಲಬ್ಯವಾಗಿದೆ.
ಎಸ್ಪಿ ಮಿಥುನ್ ಕುಮಾರ್ ಜಿ.ಕೆ, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಕಾರಿಯಪ್ಪ ಎ.ಜಿರವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಬಾಬು ಆಂಜನಪ್ಪ ಮೇಲ್ವಿಚಾರಣೆಯಲ್ಲಿ, ತುಂಗನಗರ ಪೊಲೀಸ್ ಠಾಣೆ ಪಿಐ ಮಂಜುನಾಥ್ ಬಿ, ಮತ್ತು ಪಿಎಸ್ಐ ಸಿದ್ದಪ್ಪ,ರವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿನಡೆಸಿದ್ದಾರೆ.
ಆರೋಪಿತರ ವಿರುದ್ಧ ತುಂಗಾನಗರ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್