ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.


ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಲಪಾತಗಳು ಮರುಜೀವ ಪಡೆದುಕೊಂಡಿವೆ. ಕಳೆದ ವರ್ಷ ಸರಿಯಾಗಿ ಮಳೆಯಾಗದ ಹಿನ್ನೆಲೆಯಲ್ಲಿ ಜಲಪಾತಗಳ ವೀಕ್ಷಣೆ ಹಾಗೂ ಪ್ರಕೃತಿ ಸೌಂದರ್ಯ ಸವಿಯುವುದಕ್ಕೆ ಪ್ರವಾಸಿಗರಿಗೆ ನಿರಾಸೆ ಉಂಟಾಗಿತ್ತು. ಆದರೆ, ಈ ಬಾರಿ ಮಳೆಗಾಲ ಆರಂಭವಾಗುತ್ತಿದ್ದಂತೆ ಪ್ರವಾಸಿಗರ ದಂಡು ಕೂಡ ಎಲ್ಲೆಡೆ ಕಾಣತೊಡಗಿದೆ. ಅದೇ ರೀತಿ ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪದ ಅಬ್ಬೆ ಫಾಲ್ಸ್ ವೀಕ್ಷಣೆಗೆ ಬಂದಿದ್ದ 12 ಜನ ಪ್ರವಾಸಿಗರು ನೀರಿನ ರಭಸವನ್ನು ಅರಿಯದೇ ಈಜಲು ತೆರಳಿದ್ದಾರೆ. ಆಗ ಒಬ್ಬ ಪ್ರವಾಸಿಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ಬೆಂಗಳೂರಿನಿಂದ ಅಬ್ಬೆ ಫಾಲ್ಸ್ ವೀಕ್ಷಣೆಗೆ ಬಂದಿದ್ದ ಪ್ರವಾಸಿಗ ವಿನೋದ್ ಕುಮಾರ್ (26) ನೀರು ಪಾಲಾದ ವ್ಯಕ್ತಿಯಾಗಿದ್ದಾನೆ. ಈ ವಿನೋದ್ ಬಳ್ಳಾರಿ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಖಾಸಗಿ ಸಂಸ್ಥೆಯಿಂದರಲ್ಲಿ ಕೆಲಸ ಮಾಡುತ್ತಿದ್ದನು. ಮಳೆಗಾಲದ ಹಿನ್ನೆಲೆಯಲ್ಲಿ 12 ಜನ ಸ್ನೇಹಿತರು ಪ್ರವಾಸಕ್ಕೆಂದು ಬಂದಾಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.

ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಸ್ನೇಹಿತನನ್ನು ಕಾಪಾಡುವಷ್ಟೂ ಗುಂಪಿನಲ್ಲಿದ್ದ ಯಾರೊಬ್ಬರಿಗೂ ಈಜು ಬರುತ್ತಿರಲಿಲ್ಲ. ಜಲಪಾತ ಆಗಿದ್ದರಿಂದ ನೀರಿನ ರಭಸಕ್ಕೆ ಯಾವುದಾದರೂ ಕಲ್ಲು ಬಂಡೆಗಳಿಗೆ ಹೋಗಿ ಬಿದ್ದರೆ ಭಯವೆಂದು ಯಾರೊಬ್ಬರೂ ಆತನನ್ನು ನೀರಿಗಿಳಿದು ರಕ್ಷಣೆ ಮಾಡುವ ಧೈರ್ಯವನ್ನೂ ಮಾಡಿಲ್ಲ. ಆದರೆ, ಸ್ನೇಹಿತ ನೀರಿನಲ್ಲಿ ಕೊಚ್ಚಿಕೊಂಡು ಹೋದ ನಂತರ ಪೊಲೀಸರಿಗೆ ತೀರ್ಥಹಳ್ಳಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿದ ನಗರ ಠಾಣೆ ಪಿಎಸ್ಐ ರಮೇಶ್ ಮೃತ ವಿನೋದ್ ಅವರ ದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಇನ್ನೂ ವಿನೋದ್ ಕುಮಾರ್ ಹುಡುಕಾಟ ಕಾರ್ಯಾಚರಣೆ ಸಾಗಿದೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ

ತೀರ್ಥಹಳ್ಳಿಗೆ ಯುವ ಐಪಿಎಸ್ ಅಧಿಕಾರಿ: ನೂತನ ಡಿವೈಎಸ್ಪಿಯಾಗಿ ಭಾನುಪ್ರಕಾಶ್ ಜೆ. ನೇಮಕ Young IPS officer Bhanu Prakash J.…

17 hours ago

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ

ಹೋಟೆಲ್, ಸರ್ಕಾರಿ ಹಾಸ್ಟೆಲ್‌ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ: ಆಹಾರ ಸುರಕ್ಷತೆ ಪರಿಶೀಲನೆ Shivamogga officials led by SDO Dr.…

17 hours ago

ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು

ಶಿವಮೊಗ್ಗದಲ್ಲಿ ಪಿಡಿಒ ಮನೆಗೆ ಕನ್ನ: 943 ಗ್ರಾಂ ಚಿನ್ನಾಭರಣ ಸೇರಿ 71 ಲಕ್ಷ ರೂ. ಮೌಲ್ಯದ ವಸ್ತು ಕಳವು Shivamogga…

17 hours ago

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು

ನ್ಯಾಯದ ಜೊತೆಗೆ ಸಾಮಾಜಿಕ ಕಳಕಳಿ – ಖುದ್ದು ಫೀಲ್ಡಿಗಿಳಿದು ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿಯ ಭವಿಷ್ಯಕ್ಕೆ ಬೆಳಕಾದ ನ್ಯಾಯಾಧೀಶರು Hosanagara JMFC…

21 hours ago

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ

ನೆಲ್ಲಿಬೀಡು ಅಪಘಾತದಲ್ಲಿ ಯುವತಿ ಸಾವು: ಕುಟುಂಬಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವಾನ MLA Gopalakrishna Beluru visited the families…

22 hours ago

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ

ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration…

23 hours ago