ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಿಪ್ಪನ್‌ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಒಟ್ಟು 35 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು 13 ಕ್ಷೇತ್ರದಿಂದ 35 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಡಿದ್ದು ಜೂ.22 ರಂದು ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾಗಿದೆ.

ಹೊಸನಗರ ಕ್ಷೇತ್ರದಿಂದ ಎಂ ಎಂ ಪರಮೇಶ್ ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಈ ಕ್ಷೇತ್ರಕ್ಕೆ ನಾಲ್ಕನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಿಪ್ಪನ್‌ಪೇಟೆ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಎಂ ಎಂ ಪರಮೇಶ್ 9 ನೇ ಬಾರಿಗೆ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿದ್ದು ನಾಲ್ಕನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಆರ್ ಎಂ ಮಂಜುನಾಥ್ ಗೌಡರವರ ಕೈ ಬಲಪಡಿಸಿದಂತಾಗಿದೆ.

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಎಂ ಎಂ ಪರಮೇಶ್ ರವರಿಗೆ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ,ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ ,ಮುಖಂಡರಾದ ಅಮೀರ್ ಹಂಜಾ , ಈಶ್ವರಪ್ಪ ಗೌಡ ,ರಿಪ್ಪನ್‌ಪೇಟೆ ಘಟಕದ ಕಾಂಗ್ರೆಸ್ ಅಧ್ಯಕ್ಷ ಗಣಪತಿ ಗವಟೂರು, ಆಸೀಫ಼್ ಭಾಷಾ , ಜಿ ಆರ್ ಗೋಪಾಲಕೃಷ್ಣ, ಎನ್ ಪಿ ರಾಜು ,ಮಂಜುನಾಥ್ ಭಂಡಾರಿ ರಿಪ್ಪನ್‌ಪೇಟೆ  ಹಾಗೂ ಇನ್ನಿತರರು ಶುಭಾಶಯ ಕೋರಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

2 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

2 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

9 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago