ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು 


ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ.

ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಮೃತ ವಸಂತಾ ಪತಿ ಶಿಗ್ಗಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿದ್ದಾರೆ. ಸಾಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಲದಿನಗಳಿಂದ ಡೆಂಗ್ಯೂ ಪ್ರಕರನಗಳು ಹೆಚ್ಚುತ್ತಿದ್ದು, ಆರೋಗ್ಯಾಧಿಕಾರಿಗಳು ಹಾಗೂ ಜನರು ಈ ಬಗ್ಗೆ ಜಾಗೃತಿ ಹಾಗೂ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.

Leave a Reply

Your email address will not be published. Required fields are marked *