ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa

ನಟ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಹೇಳಿಕೆ – ಕುಮಾರ್ ಬಂಗಾರಪ್ಪ ಮನೆ ಮೇಲೆ ಅಭಿಮಾನಿಗಳಿಂದ ಮುತ್ತಿಗೆ | Shivarajkumar – kumarbangarappa


ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ( Kumar Bangarppa ) ಅವರ ಬೆಂಗಳೂರಿನ ಸದಾಶಿವನಗರ ಮನೆ ಮೇಲೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿಯಿಂದ ಸಂಸದ ಬಿವೈ ರಾಘವೇಂದ್ರ, ಕಾಂಗ್ರೆಸ್​ನಿಂದ ನಟ ಶಿವರಾಜಕುಮಾರ್​ ಪತ್ನಿ ಗೀತಾ ಶಿವರಾಜಕುಮಾರ್​ ಮತ್ತು ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಸ್ಪರ್ಧಿಸಿದ್ದರು.ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಬಿವೈ ರಾಘವೇಂದ್ರ ಗೆಲುವಿನ ಬಳಿಕ, ಬಿಜೆಪಿ ನಾಯಕ ಕುಮಾರ್​ ಬಂಗಾರಪ್ಪ ನಟ ಶಿವರಾಜಕುಮಾರ್​ ಅವರ ಬಗ್ಗೆ ಲಘುವಾಗಿ ಬರೆದು ಫೇಸ್​ಬುಕ್​​ನಲ್ಲಿ ಪೋಸ್ಟ್​​ ಹಾಕಿದ್ದು, ಶಿವಣ್ಣ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.08) ನಟ ಶಿವರಾಜಕುಮಾರ್ ಬೆಂಬಲಿಗರು ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್​ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿದ್ದಾರೆ.

ಕುಮಾರ್​ ಬಂಗಾರಪ್ಪ ಫೋಸ್ಟ್​ನಲ್ಲಿ ಏನಿದೆ?

ಕುಮಾರ್ ಬಂಗಾರಪ್ಪ ಫೇಸ್​ಬುಕ್​ನಲ್ಲಿ ಪೋಸ್ಟ್, ತಮ್ಮ ಸಹೋದರ ಮಧು ಬಂಗಾರಪ್ಪ, ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಟೀಕಿಸಿರುವ ಜೊತೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಿವರಾಜ್ ಕುಮಾರ್ ಅವರ ಬಗ್ಗೆ ಲಘುವಾಗಿ ಬರೆದಿದ್ದರು. “ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು” ಎಂದಿದ್ದರು.

ಅಷ್ಟಕ್ಕೆ ಸುಮ್ಮನಾಗದೆ, “ನನ್ನ ತಂಗಿ (ಗೀತಾ ಶಿವರಾಜ್ ಕುಮಾರ್) ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು” ಎಂದು ಎಚ್ಚರಿಕೆಯನ್ನು ಸಹ ಕೊಟ್ಟಿದ್ದರು.

ಕುಮಾರ್​ ಬಂಗಾರಪ್ಪ ಅವರ ಈ ಫೋಸ್ಟ್​​ನಿಂದ ಆಕ್ರೋಶಗೊಂಡಿರುವ ಶಿವಣ್ಣ ಅಭಿಮಾನಿಗಳು, ಕುಮಾರ ಬಂಗಾರಪ್ಪ ಅವರ ನಿವಾಸದ ಗೇಟ್ ಒಳಗೆ ನುಗ್ಗಿ ದಿಕ್ಕಾರ ಕೂಗಿದರು. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಯಿಂದ ಹೊರಗೆ ಹೋಗುವಂತೆ ಮನವಿ ಮಾಡಿದರು. ಈ ವೇಳೆ ಅಭಿಮಾನಿಗಳು ಮತ್ತು ಪೊಲೀಸರ ಮಾತಿನ ಚಕಮಕಿ ಏರ್ಪಟ್ಟಿತು.

“ಶಿವರಾಜಕುಮಾರ್ ಅವರ ಬಗ್ಗೆ ರಾಜಕುಮಾರ್ ಕುಟುಂಬದ ಬಗ್ಗೆ ಮಾತಾಡಿದ್ದಾರೆ. ಇದು ನಮಗೆ ನೋವಾಗಿದೆ. ಅವರನ್ನ ಹೊರಗೆ ಕರೆಸಿ ಕ್ಷಮೆ ಕೇಳುವಂತೆ ಹೇಳಿ” ಎಂದು ಅಭಿಮಾನಿಗಳು ಒತ್ತಾಯಿಸಿದರು. ಪೊಲೀಸರು ಅಭಿಮಾನಿಗಳನ್ನು ವಶಕ್ಕೆ ಪಡೆದುಕೊಂಡರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

6 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

6 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

8 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

8 hours ago

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

11 hours ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

11 hours ago