ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | MLC election

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿ ಭೋಜೆಗೌಡ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.


ನೈರುತ್ಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಭೋಜೆಗೌಡ ಪ್ರಚಂಡ ಗೆಲುವು ಸಾಧಿಸುತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಬಾವುಟ ಹಿಡಿದ ಕಾರ್ಯಕರ್ತರು, ಪ್ರಧಾನಿ ಮೋದಿ,ಹೆಚ್ ಡಿ ದೇವೆಗೌಡ, ಯಡಿಯೂರಪ್ಪ, ಕುಮಾರಸ್ವಾಮಿ ಅವರ ಪರ ಘೋಷಣೆ ಕೂಗಿದರು.

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಒಟ್ಟು 19479 ಮತಗಳು ಚಲಾವಣೆಯಾಗಿದ್ದು 821 ಮತಗಳು ಕುಲಗೆಟ್ಟಿವೆ. 18658 ಮತಗಳು ಸಿಂಧುವಾಗಿದ್ದು 9,330 ಖೋಟಾ ನಿಗದಿಯಾಗಿತ್ತು. 9,829 ಮತಗಳ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಭೋಜೇಗೌಡ ಗೆಲುವು ಸಾಧಿಸಿದ್ದಾರೆ.ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥಗೆ 4562 ಮತಗಳು‌ ಲಭಿಸಿವೆ.

ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅರ್ ಎ ಚಾಬುಸಾಬ್ , ಬಿಜೆಪಿ ಮುಖಂಡರಾದ ಎಂ ಬಿ‌ ಮಂಜುನಾಥ್ ,ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ , ಮುಖಂಡರಾದ ಸುರೇಶ್ ಸಿಂಗ್ , ಸೋಮಶೇಖರ್ ದೂನ , ಪಿ ರಮೇಶ್ , ರಾಮಚಂದ್ರ , ಸುಧೀರ್ ಪಿ , ಮುರುಳಿ ಕೆರೆಹಳ್ಳಿ ,ಈಶ್ವರ್ ಮಳಕೊಪ್ಪ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago