ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ
ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ.
ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ ಉರುಳಿ ಬಿದ್ದಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಇಂದು ಮಧ್ಯಾಹ್ನ 1ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯ ಶಾಸಕರು ಆಪ್ತ ಕಾರ್ಯದರ್ಶಿ ತಕ್ಷಣವೇ ಘಟನಾ ಸ್ಥಳಕ್ಕೆ ಬೇಟಿ ನೀಡಿ ನೊಂದವರಿಗೆ ಸಾಂತ್ವಾನ ಹೇಳಿ ಆದಷ್ಟು ಬೇಗ ಶಾಸಕರನ್ನು ಕರೆ ತಂದು ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳೀಯ ಯುವ ಮುಖಂಡ ಇಕ್ಬಾಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಇಂದು ಸುರಿದ ಬಾರಿ ಮಳೆಗೆ ಮರ ಬುಡ ಸಮೇತ ಮನೆಯ ಮೇಲೆ ಒರಗಿದೆ. ಆರ್ಥಿಕವಾಗಿ ಅತ್ಯಂತ ಹಿಂದುಳಿದ ಮಣಿ ಕುಟುಂಬ ಈ ಮಳೆಗಾಲದ ಆರಂಭದಲ್ಲೇ ಮನೆ ಕಳೆದುಕೊಂಡು ಬೀದಿಗೆ ಬೀಳುವಂತಾಗಿದ್ದು, ಶಾಸಕರ ಆಪ್ತ ಕಾರ್ಯದರ್ಶಿಗಳು ನೀಡಿರುವ ಭರವಸೆಯೇ ಮಣಿ ಕುಟುಂಬಕ್ಕೆ ದಿಕ್ಕಾಗಬೇಕಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್