ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ

ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನವಾಗಿರುವ ಡಿವೈಎಸ್ಪಿ ಗಜಾನನ ವಾಮನ ಸುತರ

ತೀರ್ಥಹಳ್ಳಿ : ಮನೆಯ ಹಿಂಭಾಗ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ.


ತೀರ್ಥಹಳ್ಳಿ ತಾಲೂಕಿನ ಹುತ್ತಳ್ಳಿ ಗ್ರಾಮದ ಗುರುಮೂರ್ತಿ ಬಂಧಿತ ಆರೋಪಿಯಾಗಿದ್ದು 2.50000 ಲಕ್ಷ ಮೌಲ್ಯದ ಹಸಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿಯು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ ಎಂದು ಬಂದ ಖಚಿತ ಮಾಹಿತಿಯ ಮೇರೆಗೆ ಎಸ್ ಪಿ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಎಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ  ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತರ ನೇತೃತ್ವದ ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ದಾಳಿ ನಡೆಸಿ ಅಡಿಕೆ ಗಿಡಗಳ ಮದ್ಯೆ ಬೆಳೆದಿದ್ದ ಅಂದಾಜು ಮೌಲ್ಯ 2,50,000/-  ರೂಗಳ 9 ಕೆಜಿ 524 ಗ್ರಾಂ ತೂಕದ  ಒಟ್ಟು 14 ಹಸಿ ಗಾಂಜಾ ಗಿಡಗಳನ್ನು ಅಮಾನತ್ತು ಪಡಿಸಿಕೊಂಡು ಆರೋಪಿತನ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆ ಗುನ್ನೆ ಸಂಖ್ಯೆಃ 0148/2024  ಕಲಂ 8C, 20 (a) (i) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.

ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನವಾಗಿರುವ ಡಿವೈಎಸ್ಪಿ ಗಜಾನನ ವಾಮನ ಸುತರ

ತೀರ್ಥಹಳ್ಳಿ ಉಪವಿಭಾಗದ ವ್ಯಾಪ್ತಿಯ ಗಾಂಜಾ ಗಿರಾಕಿಗಳಿಗೆ ಸಿಂಹ ಸ್ವಪ್ನವಾಗಿರುವ ಡಿವೈಎಸ್ಪಿ ಗಜಾನನ ವಾಮನ ಸುತರ ಪ್ರಸಕ್ತ ವರ್ಷದಲ್ಲಿ 30 ಕ್ಕೂ ಅಧಿಕ ಪ್ರಕರಣಗಳನ್ನು ಪತ್ತೆ ಹಚ್ಚಿ ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟಿದ್ದಾರೆ.

ಕೊಲೆ, ದರೋಡೆ, ಅತ್ಯಾಚಾರ, ಅಪಘಾತ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಸೇವಿಸಿ ಕೃತ್ಯವೆಸಗಿರುವುದು ಸಾಬೀತಾಗಿದೆ. ಅಪರಾಧ ಕೃತ್ಯಗಳಿಗೆ ಪ್ರೇರೇಪಿಸುವ ಗಾಂಜಾ ಚಟಕ್ಕೆ ಬಿದ್ದ ಯುವ ಸಮೂಹ ಹಾದಿ ತಪ್ಪುತ್ತಿರುವುದು ಸ್ಪಷ್ಟವಾಗಿದೆ.

ಗಾಂಜಾ ಪ್ರಕರಣಗಳಲ್ಲಿ ಇತ್ತೀಚಿನವರೆಗೂ ಬರೀ ಬಳಕೆದಾರರನ್ನಷ್ಟೇ ಹಿಡಿದು ಕೇಸು ಹಾಕಲಾಗುತಿತ್ತು ಕಳೆದೊಂದು ವರ್ಷದಿಂದ ಡಿವೈಎಸ್ಪಿ ಗಜಾನನ ವಾಮನ ಸುತರ ನೇತ್ರತ್ವದಲ್ಲಿ ಕಿಂಗ್‌ಪಿನ್‌ಗಳ ಬೆನ್ನತ್ತಿದೆ. ಬಳಕೆದಾರರಿಂದ ಒಂದು ಮತ್ತು ಎರಡನೇ ಹಂತದ ಪೂರೈಕೆದಾರರ ಮಾಹಿತಿ ಪಡೆದು ಅವರನ್ನು ವಶಕ್ಕೆ ಪಡೆದು ಕಿಂಗ್‌ಪಿನ್‌ಗಳನ್ನು ಪತ್ತೆ ಹಚ್ಚಿ ಹೆಡೆಮುರಿ ಕಟ್ಟಲು ಇಲಾಖೆ ಮುಂದಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು

ನೀರಿನಲ್ಲಿ ಅಡಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನ ; ಸಿನಿಮೀಯ ರೀತಿಯಲ್ಲಿ ರೌಡಿಶೀಟರ್‌ನನ್ನು ಬಂಧಿಸಿದ ಪೊಲೀಸರು Bhadravathi police dramatically…

4 hours ago

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ

ಅಜಾಗರೂಕ ಚಾಲನೆಯಿಂದ ಕೆರೆಗೆ ನುಗ್ಗಿದ ಲಾರಿ! ತಪ್ಪಿದ ಭಾರಿ ದುರಂತ A container lorry allegedly driven recklessly under…

4 hours ago

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ

ರಿಪ್ಪನ್‌ಪೇಟೆ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಅನಾಹುತ; ಡಿಸ್ಕಸ್ ತಲೆಗೆ ಬಿದ್ದು ಶಿಕ್ಷಕ ಗಂಭೀರ ಗಾಯ A physical education teacher…

9 hours ago

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು

ನೆಲ್ಲಿಬೀಡು ಟಿಪ್ಪರ್ – ಬೈಕ್ ಅಪಘಾತ: ಮಗಳ ಸಾವಿನ ಬಳಿಕ ಚಿಕಿತ್ಸೆ ಫಲಿಸದೆ ತಂದೆಯೂ ಮೃತ್ಯು A tragic tipper-bike…

12 hours ago

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್

ಬಾಲಕ ಓಡಿಸಿದ ಬೊಲೆರೊ, ದಂಡ ಕಟ್ಟಿದ ತಂದೆ! ₹26,500 ಫೈನ್ A Shivamogga court fined a father ₹26,500…

12 hours ago

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

1 day ago