w
Headlines
Home » ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ


ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ ವಯಕ್ತಿಕ ಧನ ಸಹಾಯ ಮಾಡಿದ ಅವರು, ಮಳೆಗಾಲ ಮುಗಿಯುವವರೆಗೂ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲೇ ಇರುವಂತೆ ಸೂಚಿಸಿದರು.

ಸದ್ಯಕ್ಕೆ ಉತ್ತಮ ಮಳೆ ಆಗುವ ವಾತಾವರಣ ಕಂಡು ಬರುತ್ತಿದ್ದು, ರೈತರ ಕೆಲಸಗಳು ಆರಂಭಗೊಂಡಿವೆ . ಸರಕಾರ ಕೂಡಾ ರೈತರಿಗೆ ಉತ್ತಮ ಬೀಜ, ಗೊಬ್ಬರ ಸಿಗುವಂತೆ ಈಗಾಗಲೇ ಕ್ರಮ ಕೈಗೊಂಡಿದೆ. ಆದರೆ ಎಲ್ಲಿಯೂ ವ್ಯತ್ಯಾಸ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದರು.


ಶನಿವಾರ ಸುರಿದ ಭಾರಿ ಮಳೆಗೆ ದೊಂಬೇಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ ಉರುಳಿ ಅಪಾರ ಪ್ರಮಾಣದ ನಷ್ಟ ಉಂಟಾಗಿತ್ತು.  ನಿನ್ನೆಯೇ ಘಟನಾ ಸ್ಥಳಕ್ಕೆ ಬೇಟಿ ನೀಡಿದ್ದ ಶಾಸಕರ ಆಪ್ತ ಕಾರ್ಯದರ್ಶಿ ಮಂಜುನಾಥ ಸಣ್ಣಕ್ಕಿ ಅವರು ಶಾಸಕರ ಭೇಟಿ ನೀಡಿ ಸಹಕಾರದ ಭರವಸೆಯನ್ನು ಕುಟುಂಬಕ್ಕೆ ನೀಡಿದ್ದರು. ಅದರಂತೆ ಬೇಳೂರು ಗೋಪಾಲಕೃಷ್ಣ ಅವರು ಇಂದು ಬೇಟಿ ನೀಡಿ ಮನೆ ಕಳೆದುಕೊಂಡ ಕುಟುಂಬಕ್ಕೆ ವೈಯಕ್ತಿಕವಾಗಿ ಧನ ಸಹಾಯ ನೀಡಿ, ಸರ್ಕಾರದಿಂದ ಬರುವ ಸಹಾಯ ಮತ್ತು ನೆರವನ್ನು ಒದಗಿಸಿಕೊಡುವ ಭರವಸೆ ನೀಡಿದರು.

ಜೊತೆಗೆ ನಿರಾಶ್ರಿತ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳು ಕ್ರಮ ವಹಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಹರಿದ್ರಾವತಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಆರ್.ಮಂಜುನಾಥ, ಮುಖಂಡರುಗಳಾದ ಮಂಡಗಳಲೆ ಗಣಪತಿ, ಶೇಖರಪ್ಪ ಗೌಡ, ಸಾಕಮ್ಮ ಮನೋಹರ್, ಗುಡ್ಲೇಕೇವಿ ಹಿರಿಯಪ್ಪ, ಇಕ್ಬಾಲ್, ಏರ್ಟೆಲ್ ಚಂದ್ರು, ಸಾಧಿಕ್ ಅಲಿ, ಶಿವಮೂರ್ತಿ ಹರತಾಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.