ಮೂರನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ – ರಿಪ್ಪನ್ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete
ರಿಪ್ಪನ್ಪೇಟೆ : ದೇಶದ ಪ್ರಧಾನಿಯಾಗಿ ಮೂರನೇ ಭಾರಿಗೆ ನರೇಂದ್ರ ಮೋದಿಜಿ ಅವರು ಪ್ರಮಾಣ ವಚನ ಸ್ವಿಕರಿಸುತ್ತಿದ್ದಂತೆ ಪಟ್ಟಣದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.
ಪಟ್ಟಣದ ವಿನಾಯಕ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸುವದರೊಂದಿಗೆ , ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್ ಡಿ ಕುಮಾರಸ್ವಾಮಿ ಪರವಾದ ಘೋಷಣೆಗಳನ್ನು ಕೂಗಿದರು.
ಸಂಭ್ರಮಾಚರಣೆಗೂ ಮುನ್ನ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿ ಸಂಭ್ರಮಾಚರಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಅರ್ ಎ ಚಾಬುಸಾಬ್ , ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸುಂದರೇಶ್ ಕೆರೆಹಳ್ಳಿ , ತಾಲೂಕ್ ಜೆಡಿಎಸ್ ಅಧ್ಯಕ್ಷ ಎನ್ ವರ್ತೇಶ್ , ಮುಖಂಡರಾದ ಎಂ ಬಿ ಮಂಜುನಾಥ್ , ಸುರೇಶ್ ಸಿಂಗ್ , ಸುಧೀಂದ್ರ ಪೂಜಾರಿ,ದೇವೇಂದ್ರಪ್ಪ ಗೌಡ , ಪಿ ರಮೇಶ್ , ಸುಧೀರ್ ಪಿ , ಪದ್ಮಾ ಸುರೇಶ್ , ರಾಜು ದೂನಾ ,ಲೀಲಾ ಶಂಕರ್ ,ನಾಗರತ್ನ ದೇವರಾಜ್ , ಮುರುಳಿ ಕೆರೆಹಳ್ಳಿ ಹಾಗೂ ಇನ್ನಿತರರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್