January 11, 2026

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ರೆಡಿ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ದ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ ಹೆಸರುಗಳ ಪಟ್ಟಿಯನ್ನು ಪರಿಷ್ಕರಿಸಿದ ಹೈಕಮಾಂಡ್ 7 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. 

ಹಿಂದುಳಿದ ವರ್ಗದಿಂದ ಯತೀಂದ್ರ ಸಿದ್ದರಾಮಯ್ಯ, ಬೋಸರಾಜು, ಎಸ್ಸಿಯಿಂದ ವಸಂತಕುಮಾರ್, 
ಎಸ್ಟಿಯಿಂದ ವಿ.ಎಸ್. ಉಗ್ರಪ್ಪ,
ಒಕ್ಕಲಿಗ ಸಮುದಾಯದಿಂದ ಗೋವಿಂದರಾಜು, 
ಮುಸ್ಲಿಂ ಸಮುದಾಯದಿಂದ ಇಸ್ಮಾಯಿಲ್ ತಮಟಗಾರ, 
ಕ್ರಿಶ್ಚಿಯನ್ ಸಮುದಾಯದಿಂದ ಐವನ್ ಡಿಸೋಜ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಜೂನ್ 13 ರಂದು ವಿಧಾನಸಭೆಯಿಂದ ವಿಧಾನಪರಿಷತ್ ಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ಗೆಲ್ಲಬಹುದಾದ 7 ಸ್ಥಾನಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಇಂದು ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

About The Author

Leave a Reply

Your email address will not be published. Required fields are marked *