ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು ನಟ ದರ್ಶನ್ ಸೇರಿ ಆರೋಪಿಗಳನ್ನ ಕೋರ್ಟ್ ಗೆ ಹಾಜರುಪಡಿಸಿದ್ದರು.
ವಾದ ಪ್ರತಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಮತ್ತು ಪವಿತ್ರಾಗೌಡ ಸೇರಿ 13 ಆರೋಪಿಗಳನ್ನ ಜೂನ್ 20 ರವರೆಗೆ ಅಂದರೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಆರೋಪಿಗಳಾದ ನಟ ದರ್ಶನ್ , ಪವಿತ್ರಾಗೌಡ, ಪವನ್, ರಾಘವೇಂದ್ರ, ನಂದೀಶ, ಜಗದೀಶ್ , ಅನುಕುಮಾರ, ವಿನಯ್ , ಲಕ್ಷ್ಮಣ್ ಸೇರಿ 13 ಆರೋಪಿಗಳನ್ನ ಕಸ್ಟಡಿಗೆ ನೀಡಲಾಗಿದೆ ಎನ್ನಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್