ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News
ಶಿವಮೊಗ್ಗದ ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದ್ದು,ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.