ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta


ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್‌ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್ ಕಸಬಾ ಹೋಬಳ ಬಳಸಗೋಡು ಗ್ರಾಮದ ಜಮೀನಿನ ಆರ್.ಟಿ.ಸಿ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಾಗರ ತಾಲ್ಲೂಕ್ ಕಛೇರಿಯ ಭೂಮಿ ಕೇಂದ್ರಕ್ಕೆ ಹೋಗಿ 1999 ರಿಂದ 2001 ರ ವರೆಗೆ ಕೈ ಬರಹದ ಪಹಣಿಯನ್ನು ತೆಗೆಸಿಕೊಂಡು ಬರಲು ಪಿಕ್ಯಾದಿಗೆ ತಿಳಿಸಿದ್ದರಿಂದ ವಿದ್ಯಾದಿ ಅವರ ಸ್ನೇಹಿತರಾದ ನವೀನ.ಜೆ ರವರೊಂದಿಗೆ ದಿನಾಂಕ: 05/06/2024 ರಂದು ಸಾಗರ ತಾಲ್ಲೂಕ್ ಕಛೇರಿಯ ದಾಖಲಾತಿ ವಿಭಾಗಕ್ಕೆ ಹೋಗಿ ದಾಖಲಾತಿಗಳನ್ನು ನೀಡಲು ಅರ್ಜಿಯನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದೆ.

ಅಟೆಂಡರ್ ಬಸವರಾಜ್ ಎಲ್ಲಾ ದಾಖಲಾತಿಗಳನ್ನು ಜೆರಾಕ್ಸ್ ಮಾಡಿಸಬೇಕು. ಚಲನ್ ಕಟ್ಟಬೇಕು ಖರ್ಚು ಇದೆ ಎಂದು ಪಿರಾದಿಯಿಂದ ಒಟ್ಟು 1500/- ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟು ಅದೇ ದಿವಸ ಮದ್ಯಾಹ್ನ 1,500/-ಗಳನ್ನು ಪಿರಾದಿಯಿಂದ ಲಂಚದ ಹಣವನ್ನು ಪಡೆದಿರುತ್ತಾರೆ. ಮನಃ ಅಟೆಂಡರ್ ಬಸವರಾಜ್ ಪಿಲ್ಯಾದಿ ಬಳಿ ನೀನು ಕೊಟ್ಟದ್ದು ಶೀರಸ್ತೇದಾರರಿಗೆ ಕೊಟ್ಟು ಪಹಣಿಗೆ ಸಹಿ ಮಾಡಿಸ್ತೀನಿ ನನಗೆ ನೀನು 2000/- ರೂಗಳನ್ನು ಕೊಡಬೇಕು ಅಂತ ಮತ್ತೆ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆಂದು. ಸದರಿ ಎರಡೂ ಘಟನೆಗಳನ್ನು ಪಿದ್ಯಾದಿ ಸ್ನೇಹಿತ ನವೀನ್ ಜೆ ರವರು ಅವರ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿರುತ್ತಾರೆ. ಸದರಿ ಸಾಗರ ತಾಲ್ಲೂಕ್ ಕಛೇರಿಯ ದಾಖಲಾತಿ ವಿಭಾಗದ ಅಟೆಂಡರ್ ಬಸವರಾಜ್ ರವರ ವಿರುದ್ಧ ಈ ದಿವಸ ದಿನಾಂಕ:06/06/2024 ರಂದು ಪ್ರಕರಣ ದಾಖಲಾಗಿರುತ್ತದೆ ಎಂದು ಹೇಳಿದೆ.


ಅದರಂತೆ ಈ ದಿವಸ ದಿನಾಂಕ:-06/06/2024 ರಂದು ಸಂಜೆ 4 ಗಂಟೆಗೆ ಅಪಾದಿತ ಬಸವರಾಜ್ ಜಿ ಬಿನ್ ಲೇಟ್ ಗುತ್ಯಪ್ಪ 57 ವರ್ಷ, ಅಟೆಂಡರ್, ಆರ್.ಆರ್.ಟಿ ಶಾಖೆ, ದಾಖಲಾತಿ ವಿಭಾಗ, ಸಾಗರ ತಾಲ್ಲೂಕ್ ಕಛೇರಿ, ಸಾಗರ ಇವರು ಅವರ ಕಛೇರಿಯಲ್ಲಿ ಪಿರಾದುದಾರರಿಂದ ಲಂಚದ ಹಣ ರೂ 2000/- ಪಡೆದಿರುತ್ತಾರೆ ಈ ಸಮಯದಲ್ಲಿ ಟ್ರ್ಯಾಪ್ ಮಾಡಲಾಗಿರುತ್ತದೆ ಎಂದು ತಿಳಿಸಿದೆ.

ಅಪಾದಿತರನ್ನು ಬಂದಿಸಿ ಮುಂದಿನ ತನಿಖೆಯನ್ನು ಹೆಚ್.ಎಸ್ ಸುರೇಶ್ ಪೊಲೀಸ್ ನಿರೀಕ್ಷಕರು, ಕ.ಲೋ ಶಿವಮೊಗ್ಗ ಇವರು ಕೈಗೊಂಡಿದ್ದು ಇರುತ್ತದೆ. ಕರ್ನಾಟಕ ಲೋಕಾಯುಕ್ತ ಶಿವಮೊಗ್ಗದ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್. ಇವರ ಮಾರ್ಗದರ್ಶನದಲ್ಲಿ ಪ್ರಕರಣವನ್ನು ದಾಖಅಸಿ ಅಪಾದಿತನನ್ನು ಬಂದಿಸಲಾಗಿರುತ್ತದೆ ಎಂದು ಹೇಳಿದೆ.

ಟ್ರ್ಯಾಪ್ ಕಾಲಕ್ಕೆ ಶಿವಮೊಗ್ಗ ಲೋಕಾಯುಕ್ತ ಕಛೇರಿಯ ಪೊಲೀಸ್ ಅಧಿಕಾರಿಗಳಾದ ಉಮೇಶ್ ಈಶ್ವರ ನಾಯ್ಕ ಪೊಲೀಸ್ ಉಪಾಧೀಕ್ಷಕರು, ಕಲೋ ಶಿವಮೊಗ್ಗ. ಸಿಬ್ಬಂದಿಗಳಾದ ಯೋಗೇಶ್ ಸಿ.ಹೆಚ್.ಸಿ, ಸುರೇಂದ್ರ ಹೆಚ್.ಜಿ .ಸಿ.ಹೆಚ್.ಸಿ, ಬಿ.ಐ ಚನ್ನೇಶ, ಸಿ.ಪಿ.ಸಿ ರಘುನಾಯ್ಕ ಸಿ.ಪಿ.ಸಿ, ಪುಟ್ಟಮ್ಮ ಮ.ಪಿ.ಸಿ ಗಂಗಾಧರ ಎ.ಪಿ.ಸಿ ಪ್ರದೀಪ್ ಎ.ಪಿ.ಸಿ, ಜಯಂತ್ ಎ.ಪಿ.ಸಿ ಇವರುಗಳು ಹಾಜರಿದ್ದರು ಎಂದು ತಿಳಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

1 day ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

1 day ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago