ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ RCB ಅಭಿಮಾನಿಯಾದ ಜ್ಯೊಮಾಟೋ ಡೆಲಿವರಿ ಬಾಯ್

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ RCB ಅಭಿಮಾನಿಯಾದ ಜ್ಯೊಮಾಟೋ ಡೆಲಿವರಿ ಬಾಯ್

ಚುನಾವಣೆ 2024ರ ಫಲಿತಾಂಶ ಹೊರಬಿದ್ದಿದೆ. ಎನ್‌ಡಿಎ ಒಕ್ಕೂಟಕ್ಕೆ ಬಹುಮತ ಬಂದಿದ್ದು, ಸರ್ಕಾರ ರಚನೆ ಕಸರತ್ತು ಆರಂಭವಾಗಿದೆ. ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದು, ಜೆಡಿಎಸ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಶಿವಮೊಗ್ಗದಲ್ಲಿ ಬಿಜೆಪಿ ಮತ್ತೊಮ್ಮೆ ಪ್ರಾಬಲ್ಯ ಸಾಧಿಸಿದ್ದು, ಬಿವೈ ರಾಘವೇಂದ್ರ 7,78,721 ಮತಗಳನ್ನು ಪಡೆಯುವ ಮೂಲಕ 2,43,715 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರನ್ನು ಸೋಲಿಸಿದರು. ಗೀತಾ ಶಿವರಾಜ್‌ಕುಮಾರ್ 5,35,006 ಸ್ಥಾನಗಳನ್ನು ಪಡೆದರೆ, ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ 30,050 ಮತಗಳನ್ನು ಮಾತ್ರ ಪಡೆದರು.

ಆರ್‌ಸಿಬಿ ಅಭಿಮಾನಿ – ಝೊಮ್ಯಾಟೋ ಉದ್ಯೋಗಿಗೆ 7266 ಮತ

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ ಮತ್ತೊಬ್ಬ ಅಭ್ಯರ್ಥಿ ಬಂಡಿ ಎನ್ನುವವರು. ಯಾವುದೇ ರಾಜಕೀಯ ಹಿನ್ನಲೆ ಇಲ್ಲದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಂಡಿ ಎನ್ನುವವರು 7,266 ಮತಗಳನ್ನು ಪಡೆದು ಅಚ್ಚರಿ ಮೂಡಿಸಿದ್ದಾರೆ.

ಬಂಡಿ ಎನ್ನುವವರು ಆರ್‌ಸಿಬಿ ತಂಡದ ಕಟ್ಟಾ ಅಭಿಮಾನಿ, ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಕೂಡ ಅವರು ಆರ್‌ಸಿಬಿ ತಂಡದ ಜೆರ್ಸಿಯನ್ನು ಧರಿಸಿದ್ದಾರೆ.

ಬಂಡಿ ಎನ್ನುವವರು ಚುನಾವಣಾ ಆಯೋಗಕ್ಕೆ ನೀಡಿರುವ ಮಾಹಿತಿ ಪ್ರಕಾರ, ಅವರು ಝೊಮ್ಯಾಟೋದಲ್ಲಿ ಡೆಲಿವರಿ ಉದ್ಯೋಗಿಯಾಗಿದ್ದಾರೆ. ಶಿರಾ ಮೂಲದವರಾದ ಬಂಡಿ, ಶಿವಮೊಗ್ಗದಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ತುಮಕೂರಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡಿದ್ದಾರೆ. 1,11,052 ರೂಪಾಯಿ ಆಸ್ತಿ ಹೊಂದಿರುವುದಾಗಿ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

2 days ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

2 days ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

2 days ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

2 days ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

2 days ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

2 days ago