ಸಿಗಂದೂರು ದೇವಸ್ಥಾನಕ್ಕೆ ತೆರಳುತಿದ್ದವರ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ | Accident
ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಜೇನಿ ಗ್ರಾಮದ ತಿರುವಿನಲ್ಲಿ ನಡೆದಿದೆ.
ಮಾರುತಿ ಸ್ವಿಫ್ಟ್ ಕಾರಿನಲ್ಲಿ ತುಮಕೂರು ಮೂಲದ ನಾಲ್ವರು ಸಿಗಂದೂರು ದೇವಸ್ಥಾನಕ್ಕೆ ದರ್ಶನಕ್ಕೆಂದು ತೆರಳುತಿದ್ದಾಗ ಮಾರ್ಗ ಮಧ್ಯದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ.
ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಪಲ್ಟಿಯಾಗಿ ಉರುಳಿ ಬಿದ್ದಿದೆ.ಆಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ರಿಪ್ಪನ್‌ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.