ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಆರಗ ಜ್ಞಾನೇಂದ್ರ | Thirthahalli
ಇತ್ತೀಚೆಗೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಬಿದರಗೋಡು ಗ್ರಾ.ಪಂ. ವ್ಯಾಪ್ತಿಯ ಹೊಸಗದ್ದೆ ಸಮೀಪದ ಮುತ್ತುವಳ್ಳಿ ನಾಗೇಂದ್ರ ಎಂಬವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರು.
ಈ ಸಂಬಂಧ ಪ್ರಕೃತಿ ವಿಕೋಪ ಪರಿಹಾರ ನಿಧಿ ಅನ್ವಯ 5 ಲಕ್ಷ ರೂಪಾಯಿ ಪರಿಹಾರವನ್ನು ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರರವರು ಸರ್ಕಾರದಿಂದ ಮಂಜೂರು ಮಾಡಿಸಿದ್ದು ಜೂ.12ರ ಬುಧವಾರ ಮೃತ ನಾಗೇಂದ್ರ ಅವರ ಮನೆಗೆ ತೆರಳಿ ಕುಟುಂಬದವರಿಗೆ 5 ಲಕ್ಷ ರೂ. ಚೆಕ್ ವಿತರಿಸಿದರು.
ಈ ಸಂಧರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿ ಯಶವಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗಲಕ್ಷ್ಮಿ, ಸದಸ್ಯ ವೆಂಕಟೇಶ, ಮುಖಂಡರಾದ ಹೊಸಳ್ಳಿ ಸುಧಾಕರ, ಪ್ರದೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.