ಹಿರಿಯ ಪತ್ರಕರ್ತ ಅರಸಾಳು ರಂಗನಾಥ್ ನಿಧನ – ಗಣ್ಯರ ಸಂತಾಪ
ಹಿರಿಯ ಪತ್ರಕರ್ತ, ಸಹಕಾರಿ ಧುರೀಣ ಹಿರಿಯ ಪತ್ರಲರ್ತ, ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷ ಅರಸಾಳು ಎಸ್.ಜಿ.ರಂಗನಾಥ (93) ಇಂದು ಸಂಜೆ ಶಿವಮೊಗ್ಗದ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮಾದ್ಯಮ ಕ್ಷೇತ್ರದಲ್ಲಿ ವಿಶಿಷ್ಠವಾದ ಛಾಫು ಮೂಡಿಸಿದ್ದ ಅರಸಾಳು ರಂಗನಾಥ್ ರವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಜಿಲ್ಲಾ ಸಂಚಾಲಕ ಹಾಗೂ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಹಂಗಾಮಿ ಅಧ್ಯಕ್ಷರಾಗಿ ಮತ್ತು ಜಿಲ್ಲಾ ಬ್ರಾಹ್ಮಣ ಮಹಾಸಭಾ ನಿರ್ದೇಶಕರಾಗಿ, ಅರಸಾಳು ವ್ಯವಸಾಯ ಸೇವಾ ಸಹಕಾರ ಸಂಘದ ನಿವೃತ್ತ ಕಾರ್ಯದರ್ಶಿಯಾಗಿ ಹಾಗೂ ಅರಸಾಳು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಹಿರಿಯ ಚೇತನ ಎಸ್.ಜಿ.ರಂಗನಾಥರ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ , ಮಾಜಿ ಸಚಿವ ಹರತಾಳು ಹಾಲಪ್ಪ , ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ ಎಂ ಪರಮೇಶ್ ,ಜಿ.ಪಂ.ಮಾಜಿ ಸದಸ್ಯ ಬಿ.ಎಸ್.ಪುರುಷೋತ್ತಮರಾವ್ ತಾ.ಪಂ.ಮಾಜಿ ಸದಸ್ಯ ಎಂ.ಬಿ.ಲಕ್ಷ್ಮಣ ಗೌಡ , ರಿಪ್ಪನ್ಪೇಟೆ ಪತ್ರಕರ್ತರ ಬಳಗ, ಕಾಂಗ್ರೆಸ್ ಮುಖಂಡ ಬಿ.ಎಸ್.ಈಶ್ವರಪ್ಪ, ಎಲ್.ವೈ.ದಾನೇಶಪ್ಪಗೌಡ ಲಕ್ಕವಳ್ಳಿ ಇನ್ನಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್