Headlines

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Anandapura | ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದ ಹಕರೆಕೊಪ್ಪ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.


ಶನಿವಾರವಷ್ಟೇ ಸಾಗರ ರಸ್ತೆಯ ಮುಂಬಾರು ತಿರುವಿನಲ್ಲಿ ಬಸ್ ಪಲ್ಟಿಯಾಗಿತ್ತು, ಇಂದು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಚಾಲಕನಿಗೆ ತೀವ್ರ ಪ್ರಮಾಣದ ಪೆಟ್ಟಾಗಿದೆ. ತಕ್ಷಣ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.


ಬಸ್ಸಿನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಯಾವುದೇ ರೀತಿಯ ಗಾಯಗಳಾಗಿಲ್ಲ, ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಪೊಲೀಸರು ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

Exit mobile version