Bakrid Festival | ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸರ ಕಣ್ಗಾವಲು | ಶಾಲಾ ವಾಹನಗಳ ಬಗ್ಗೆ ಮತ್ತು ಆನ್ಲೈನ್ ವಂಚನೆ ಬಗ್ಗೆ ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?

ಬಕ್ರೀದ್ ಹಬ್ಬದ ಹಿನ್ನಲೆ – ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲು – ಶಾಲಾ ವಾಹನಗಳ ಬಗ್ಗೆ  ಮತ್ತು ಆನ್ಲೈನ್ ವಂಚನೆ ಬಗ್ಗೆ ತೀರ್ಥಹಳ್ಳಿ ಡಿವೈಎಸ್ಪಿ ಹೇಳಿದ್ದೇನು?

ತೀರ್ಥಹಳ್ಳಿ : ಹೊರ ರಾಜ್ಯಗಳಿಂದ ಕೆಲಸಕ್ಕಾಗಿ ಇಲ್ಲಿಗೆ ಹಲವು ಕಾರ್ಮಿಕರು ಅಥವಾ ಇನ್ನಿತರರು ಆಗಮಿಸಿದ್ದಾರೆ. ಹೊರಗಡೆಯಿಂದ ಬರುವವರಿಗೆ ಬಾಡಿಗೆ ನೀಡುವ ಅಥವಾ ಲೀಸ್ ನೀಡುವ ಮೊದಲು ಕೆಲವೊಂದು ಮಾಹಿತಿಗಳನ್ನು ಪಡೆಯಬೇಕು. ಬಾಡಿಗೆದಾರರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾಸ್ಪೋರ್ಟ್ ಸೇರಿ ಇತರ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ತಿಳಿಸಿದರು.


ಶುಕ್ರವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬಾಡಿಗೆದಾರರು ಮಾಹಿತಿ ಕೊಡಲು ಒಪ್ಪದಿದ್ದಲ್ಲಿ ಅಥವಾ ಅವರ ಬಗ್ಗೆ ಅನುಮಾನ ಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ನಾವು ಬಾಡಿಗೆದಾರರನ್ನು ಕರೆಸಿ ಮಾಹಿತಿ ಕಲೆ ಹಾಕಿ, ಕ್ರಿಮಿನಲ್ ಕೇಸ್ ಇದೆಯೋ ಇಲ್ಲವೋ ಎಂಬುದನ್ನು ತಿಳಿಸುತ್ತೇವೆ. ಮನೆ ಬಾಡಿಗೆ, ಲೀಸ್ ಅಥವಾ ಕೆಲಸಕ್ಕೆ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಅವರ ಪೂರ್ವಪರ ತಿಳಿದುಕೊಳ್ಳಿ. ಅವರ ಜೊತೆಗೆ ಅಗ್ರಿಮೆಂಟ್ ಮಾಡಿಕೊಳ್ಳಿ. ಒಂದು ವೇಳೆ ಕ್ರೈಂ ಮಾಡಿ ಹೋದರೆ ತನಿಖೆ ನಡೆಸಲು ಅವರ ಜಾಡನ್ನು ಹಿಡಿಯಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಶಾಲಾ ವಾಹನಗಳ ಬಗ್ಗೆ ಎಚ್ಚರಿಕೆ!

ಶಾಲೆಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಬಸ್, ಖಾಸಗಿ ವಾಹನ ಮತ್ತು ಶಾಲಾ ಬಸ್ ಗಳಲ್ಲಿ  ಸಾಮರ್ಥ್ಯಕ್ಕಿಂತ ಜಾಸ್ತಿ ವಿದ್ಯಾರ್ಥಿಗಳನ್ನು ಹಾಕಿ ಕರೆದುಕೊಂಡು ಹೋಗುತ್ತಿರುವ ಘಟನೆ ನಡೆಯುತ್ತಿದೆ.ಇದರ ಬಗ್ಗೆ ಶಾಲಾ ಶಿಕ್ಷಣ ಸಂಸ್ಥೆಗಳ ಜೊತೆ ಮಾತನಾಡುತ್ತೇವೆ. ಶಾಲಾ ವಾಹನಗಳಲ್ಲಿ ವಿದ್ಯಾರ್ಥಿಗಳ ಸುರಕ್ಷಿತ ಮುಖ್ಯವಾಗಿರುತ್ತದೆ. ನಿಯಮ ಬಾಹಿರ ಮಾಡುವ ವಾಹನಗಳ ಮೇಲೆ ಕೇಸ್ ದಾಖಲು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲು!

ಸೋಮವಾರ ಬಕ್ರೀದ್ ಹಬ್ಬ ಇದೆ. ಪ್ರತಿಯೊಂದು ಕಡೆ ಶಾಂತಿ ಸುವ್ಯವಸ್ಥೆ ಬಗ್ಗೆ ಎಲ್ಲಾ ಕ್ರಮಗಳನ್ನು ಅನುಸರಿಸುತ್ತಿದ್ದೇವೆ.ಚೆಕ್ ಪೋಸ್ಟ್ ಹಾಕಿರುವುದು, ರಾತ್ರಿ ಗಸ್ತು ಜಾಸ್ತಿ ಮಾಡಿದ್ದೇವೆ.ಈ ಹಬ್ಬವನ್ನು ಶಾಂತಿಯುತವಾಗಿ ಸೌಹಾರ್ದತೆಯಿಂದ ಆಚರಿಸಬೇಕು. ಶಾಂತಿ ಕದಡುವ ಕೆಲಸ ಮಾಡಬಾರದು. ಈಗಾಗಲೇ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಗಾವಲು ಇಡಲಾಗಿದೆ. ಕೋಮು ಪ್ರಚೋದನೆಗೆ ಒಳಗಾಗುವ ಮಾಹಿತಿಯನ್ನು ಎಲ್ಲೂ ಶೇರ್ ಮಾಡುವ ಹಾಗಿಲ್ಲ  ಜಾತಿ ಧರ್ಮದ ಬಗ್ಗೆ ದ್ವೇಷ ಪೂರಿತ ಮೆಸೇಜ್ ಹಾಕುವ ಕೆಲಸ ಮಾಡುವುದನ್ನು ಮಾಡಿದರೆ ಅವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಏನಾದರು ಮಾಹಿತಿ ಇದ್ದರೆ ಪೊಲೀಸ್ ಠಾಣೆಗೆ ತಿಳಿಸಬೇಕು ನೈತಿಕ ಪೊಲೀಸ್ ಗಿರಿ ಮಾಡುವ ಹಾಗಿಲ್ಲ ಎಂದು ತಿಳಿಸಿದರು.

ಆನ್ಲೈನ್ ವಂಚನೆ ಬಗ್ಗೆ ಏನು ಹೇಳಿದ್ರು?

ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಅನ್ನು ಸರಿಯಾಗಿ ಉಪಯೋಗ ಮಾಡುತ್ತಿಲ್ಲ. ಫೋಟೋ ಶೇರ್ ಮಾಡುವುದು, ಫೋಟೋ ಇಟ್ಟುಕೊಂಡು ಬ್ಲಾಕ್ ಮೆಲ್ ಮಾಡುವುದು, ಮಾಡುತ್ತಿದ್ದಾರೆ.
ಮೊದಲು ಕರೆ ಮಾಡಿ ಓಟಿಪಿ ಕೇಳುತ್ತಿದ್ದರು. ಆದರೆ ಈಗ ಆಪ್ ಅಥವಾ ಲಿಂಕ್ ಕಳಿಸಿ ಬ್ಯಾಂಕ್ ಖಾತೆ ಲಾಕ್ ಆಗಿದೆ ಸರಿ ಮಾಡುತ್ತೇವೆ ಎನ್ನುತ್ತಾರೆ. ನೀವು ಆಪ್ ಅಥವಾ ಲಿಂಕ್ ಓಪನ್ ಮಾಡಿದರೆ ಬ್ಯಾಂಕ್ ಖಾತೆಯಿಂದ ಹಣ ಹೋಗುತ್ತದೆ. ಈ ರೀತಿ ಹಲವು ಸ್ಕ್ಯಾಮ್ ಗಳು ಹೆಚ್ಚಾಗಿವೆ. ಇದರಿಂದ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು ಎಂದರು.


ತೀರ್ಥಹಳ್ಳಿಯನ್ನು ಗಾಂಜಾ ಮುಕ್ತ ಮಾಡುವುದು ಗುರಿ

ಶಿವಮೊಗ್ಗ ಮತ್ತು ತೀರ್ಥಹಳ್ಳಿಯನ್ನು ಗಾಂಜಾ ಮುಕ್ತ ಮಾಡಬೇಕು ಎಂಬುದು ನಮ್ಮ ಪೋಲೀಸರ ಆದ್ಯಾ ಕರ್ತವ್ಯವಾಗಿದೆ.ಮೊನ್ನೆ ಕೋಣಂದೂರಿನಲ್ಲಿ ಅಡಿಕೆ ತೋಟದಲ್ಲಿ ಬೆಳೆದ 10 ಕೆಜಿ ಗಾಂಜಾವನ್ನು ಸೀಜ್ ಮಾಡಿ ಹಾಗೂ ಓರ್ವನನ್ನು ವಶಕ್ಕೆ ಪಡೆದಿದ್ದೇವೆ. ಗಾಂಜಾ ಬೆಳೆಯುವುದು, ಮಾರಾಟ ಮಾಡುವುದು ಎಲ್ಲವೂ ಅಪರಾಧವಾಗಿದೆ. ಗಾಂಜಾ ಸೇವನೆ ಮಾಡಿದವರನ್ನು ಟೆಸ್ಟ್ ಮಾಡಿ ಪಾಸಿಟಿವ್ ಬಂದರೆ NDPS ಅಡಿಯಲ್ಲಿ ಪ್ರಕರಣ ದಾಖಲು ಮಾಡುತ್ತೇವೆ. 2023 -24 ರಲ್ಲಿ ಇಲ್ಲಿಯವರೆಗೆ 21 ಪ್ರಕರಣ ದಾಖಲಾಗಿದೆ ಎಂದರು.


ಗಾಂಜಾ ಎನ್ನುವುದು ಒಂದು ನರಕ. ಅದರಿಂದ ಎಷ್ಟರ ಮಟ್ಟಿಗೆ ದೂರ ಇರುತ್ತೀವಿ ಅಷ್ಟು ಒಳ್ಳೆಯದು. ಮನುಷ್ಯನ ಮಾನಸಿಕ ಹಾಗೂ ದೈಹಿಕವಾಗಿ ಅವನತಿಗೆ ಕಾರಣವಾಗುತ್ತದೆ. ಪ್ರತಿಯೊಂದು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಇದರ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ. ಇದರ ಬಗ್ಗೆ ಮುಂದೆಯೂ ಕೂಡ ಅರಿವು ಮೂಡಿಸುವ ಕೆಲಸ ಆಗುತ್ತದೆ.ಈ ವಿಚಾರದಲ್ಲಿ ಮಾಧ್ಯಮದವರು ಹಾಗೂ ಸಾರ್ವಜನಿಕರ ಸಹಾಯ ಬೇಕಿದೆ. ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಎಲ್ಲಾದರೂ ಗಾಂಜಾ ವಿಷಯಕ್ಕೆ ಸಂಬಂಧಪಟ್ಟಂತೆ ಮಾಹಿತಿ ಇದ್ದರೆ ( ಗಾಂಜಾ ಬೆಳೆದಿರುವುದು ಅಥವಾ ಮಾರಾಟ ಮಾಡುವುದು ) ನನಗೆ ಅಥವಾ ಪೊಲೀಸ್ ಠಾಣೆಗೆ ಮಾಹಿತಿ ಕೊಡಿ. ಮಾಹಿತಿ ಕೊಟ್ಟವರ ಹೆಸರನ್ನು ಗೌಪ್ಯವಾಗಿ ಇಡುತ್ತೇವೆ ಎಂದು ತಿಳಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

11 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

11 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

17 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago